ಮುಂಬೈ :15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ಡಬಲ್ ಧಮಾಕ. ಇಂದು ಎರಡು ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳ ಖುಷಿ ದ್ವಿಗುಣಗೊಂಡಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಮಧ್ಯಾಹ್ನ 3:30ಕ್ಕೆ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಬಲಿಷ್ಠ ಸಂಜು ಸ್ಯಾಮ್ಸನ್ ಅವರ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಸಂಜೆ 7:30ಕ್ಕೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಬಲಾಢ್ಯ ಲಖನೌ ಸೂಪರ್‌ಜೈಂಟ್ಸ್ ಮತ್ತು ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿ ಆಗಲಿದೆ. ರಾಜಸ್ಥಾನ್ ತಂಡ ಹೊರತುಪಡಿಸಿ ಮೂರು ತಂಡಗಳು ತಮ್ಮ ಹಿಂದಿನ ಪಂದ್ಯದಲ್ಲಿ ಗೆಲುವು ಕಂಡಿದ್ದು, ಇಂದಿನ ಸೆಣಸಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪಂದ್ಯ:ಪಾಯಿಂಟ್ ಟೇಬಲ್ನಲ್ಲಿ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ ಕಳೆದೆರಡು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಗೆಲುವಿನ ಲಯಕ್ಕೆ ಮರಳಲು ಯತ್ನಿಸುತ್ತಿದೆ. ಬಟ್ಲರ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಉತ್ತಮ ಲಯದಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್ ಮತ್ತು ಯುಜ್ವೇಂದ್ರ ಚಹಲ್ ಕೊನೆಯ ಎಸೆತದವರೆಗೂ ಛಲದ ಹೋರಾಟ ಮಾಡುವ ನುರಿತ ಬೌಲರ್‌ಗಳಾಗಿದ್ದಾರೆ. ಇತ್ತ ಪಂಜಾಬ್ ನಾಯಕ ಮಯಾಂಕ್ ಅಗರ್ವಾಲ್ ಫಾರ್ಮ್‌ಗೆ ಮರಳಿರುವುದು ತಂಡದ ಸ್ಥೈರ್ಯ ಹೆಚ್ಚಿಸಿದ್ದರೆ, ಅನುಭವಿ ಶಿಖರ್ ಧವನ್ ಆರಂಭಿಕ ಹಂತದಲ್ಲಿ ರನ್‌ಗಳಿಸುತ್ತಿದ್ದಾರೆ. ಆಲ್‌ರೌಂಡರ್ ಲಿವಿಂಗ್‌ಸ್ಟೋನ್ ಉತ್ತಮ ನಿರ್ವಹಣೆ ತೋರುತ್ತಿದ್ದಾರೆ. ಹೊಸಪ್ರತಿಭೆ ಜಿತೇಶ್ ಶರ್ಮಾ ಕೂಡ ಉತ್ತಮ ಲಯದಲ್ಲಿದ್ದಾರೆ. ಆಲ್‌ರೌಂಡರ್ ಒಡಿಯಾನ್ ಸ್ಮಿತ್ ಪಂದ್ಯವನ್ನು ಗೆದ್ದುಕೊಡುವ ಆಟಗಾರನೆಂದು ಸಾಬೀತು ಮಾಡಿದ್ದಾರೆ. ರಬಾಡ ಮತ್ತು ಆರ್ಷದೀಪ್ ಸಿಂಗ್ ಕೂಡ ಬೌಲಿಂಗ್ ವಿಭಾಗದ ಶಕ್ತಿಯಾಗಿದ್ದಾರೆ.
ಸಂಭಾವ್ಯ ಆಟಗಾರರ ಪಟ್ಟಿ: ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್, ರಾಹುಲ್ ಚಹರ್, ವೈಭವ್ ಅರೋರಾ.