ಅಹಮದಾಬಾದ್(ಗುಜರಾತ್):ಇಂಡಿಯನ್ ಪ್ರೀಮಿಯರ್ ಲೀಗ್ನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಆರ್ಸಿಬಿ ಆರಂಭದಲ್ಲೇ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು.
ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮಹತ್ವದ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಕ್ಕಾಗಿ ಇನ್ನಿಲ್ಲದ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಇವರ ವಿರುದ್ಧ ಕ್ರಿಕೆಟ್ ಪ್ರೇಮಿಗಳು ಹಾಗೂ ಆರ್ಸಿಬಿ ಫಾಲೋವರ್ಸ್ ಟೀಕೆ ವ್ಯಕ್ತಪಡಿಸಿದ್ದು, ಕೌಂಟಿ ಅಥವಾ ರಣಜಿ ಪಂದ್ಯವನ್ನಾಡಲು ಹೋಗುವಂತೆ ಒತ್ತಾಯಿಸಿ, ಟ್ವೀಟ್ ಮಾಡಿದ್ದಾರೆ.