ಡಬ್ಲಿನ್(ಐರ್ಲೆಂಡ್):ಐರ್ಲೆಂಡ್ ಎದುರಿನ ಮೊದಲ ಟಿ- 20 ಪಂದ್ಯದಲ್ಲಿ ಭಾರತವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದ 11ರಲ್ಲಿ ಉಮ್ರಾನ್ ಮಲ್ಲಿಕ್ ಸ್ಥಾನ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಹಾರ್ದಿಕ್ ಪಾಂಡ್ಯ ಈ ಪಂದ್ಯದ ನಾಯಕತ್ವ ವಹಿಸಿದ್ದಾರೆ. ಐರ್ಲೆಂಡ್ ತಂಡದ ಕಾನರ್ ಓಲ್ಫರ್ಟ್ ಕೂಡ ಈ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಈ ಪಂದ್ಯದ ಮುಖಾಂತರ ಅಂತಾರಾಷ್ಟ್ರೀಯ ತಂಡದ ನಾಯಕತ್ವವನ್ನು ಮೊದಲ ಬಾರಿ ವಹಿಸಿಕೊಂಡಿದ್ದು, ಅವರು ನಾಯಕರಾಗಿ ಡೆಬ್ಯು ಮಾಡುತ್ತಿದ್ದಾರೆ. ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ನಾಯಕತ್ವದಲ್ಲಿ ಹಾರ್ದಿಕ್ ಉತ್ತಮ ನಾಯಕತ್ವ ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.
ಐಪಿಎಲ್ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಉಮ್ರಾನ್ ಮಲ್ಲಿಕ್ ದಕ್ಷಿಣ ಆಫ್ರಿಕಾ ಎದುರಿನ ಸರಣಿಯಲ್ಲಿ ಅವಕಾಶ ಸಿಕ್ಕಿದರೂ ಪಂದ್ಯಕ್ಕೆ ಪಾದಾರ್ಪಣೆ ಮಾಡಿರಲಿಲ್ಲ. ಕಾಶ್ಮಿರದ ಹುಡುಗ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಡೆಬ್ಯು ಆಗುತ್ತಿದ್ದಾರೆ.