ನವದೆಹಲಿ: ವಿಶ್ವಕಪ್ಗೂ ಮುನ್ನ ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ನಿನ್ನೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಇದರಲ್ಲಿ ರುತುರಾಜ್ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ ಅವರನ್ನು ಸೇರಿಸಲಾಗಿದೆ. ಅಲ್ಲದೇ ಸ್ಪಿನ್ನರ್ ಆಗಿ ಆರ್ ಅಶ್ವಿನ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಸಂಜು ಸ್ಯಾಮ್ಸನ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿಲ್ಲ. ಏಷ್ಯಾಕಪ್ ತಂಡದಲ್ಲಿ ಮೀಸಲು ಆಟಗಾರನ ಸ್ಥಾನವನ್ನು ನೀಡಲಾಗಿತ್ತು. ಆದರೆ, ಆಸ್ಟ್ರೇಲಿಯಾ ವಿರುದ್ಧ ಅವರಿಗೆ ಅವಕಾಶ ನೀಡಲಾಗಿಲ್ಲ. ಈ ಬಗ್ಗೆ ಅವರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಜು ಸ್ಯಾಮ್ಸನ್ ತಂಡದಲ್ಲಿ ಆಯ್ಕೆಯಾಗದ್ದಕ್ಕೆ ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ 'ಸಂಜು ಸ್ಯಾಮ್ಸನ್ ಅವರ ಸ್ಥಾನದಲ್ಲಿ ನಾನಿದ್ದರೆ, ನಾನು ತುಂಬಾ ನಿರಾಶೆಗೊಳ್ಳುತ್ತಿದ್ದೆ' ಎಂದು ಹೇಳಿದ್ದಾರೆ. ಇರ್ಫಾನ್ ಪಠಾಣ್ ಅವರ ಈ ಪೋಸ್ಟ್‌ಗೆ ಅಭಿಮಾನಿಗಳು ನಿರಂತರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಸಂಜು ಸ್ಯಾಮ್ಸನ್‌ಗೆ ಹೀಗಾಗುತ್ತಿರುವುದು ಇದೇ ಮೊದಲಲ್ಲ, ಇದಕ್ಕೂ ಮುನ್ನ ನಿರಾಸೆ ಅನುಭವಿಸಿದ್ದಾರೆ ಎಂದು ಕಮೆಂಟ್ನಲ್ಲಿ ಬರೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 55.71 ಸರಾಸರಿ ಇದ್ದರೂ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಏಕೆ ಆಯ್ಕೆ ಮಾಡುತ್ತಿಲ್ಲ ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್‌ನಲ್ಲಿ ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.