ಹೈದರಾಬಾದ್: ಭಾರತ ತಂಡದ ಮಾಜಿ ನಾಯಕ ಅಜರುದ್ದೀನ್ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ತಮ್ಮನ್ನು ಅಮಾನತುಗೊಳಿಸಿರುವುದನ್ನು ಕಾನೂನು ಬಾಹಿರ ಎಂದು ಹೇಳಿದ್ದು, ಕ್ರಿಕೆಟ್ ಅಸೋಸಿಯೇಷನ್ನಿಂದ ತಮ್ಮನ್ನು ವಜಾ ಮಾಡಲಾಗಿದೆ ಎಂಬ ವರದಿಯಾಗಿರುವುದರಿಂದ ನೈತಿಕತೆ ಆಧಾರದ ಮೇಲೆ ಅಪೆಕ್ಸ್ ಕೌನ್ಸಿಲ್ನ ಸದಸ್ಯರು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧ ಆರೋಪ ಮಾಡಿರುವವರೆಲ್ಲರೂ ಕಳಂಕಿತರು ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಈ ತಿಂಗಳ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಅಜರುದ್ದೀನ್ಗೆ ಶೋಕಾಸ್ ನೋಟಿಸ್ ನೀಡಿತ್ತು. ಇನ್ನು ಹೆಚ್ಸಿಎ ಕೂಡ ಅವರ ಸದಸ್ಯತ್ವ ರದ್ದುಗೊಳಿಸಿತ್ತು. ಅಜರ್ ಕಾರ್ಯ ವಿಧಾನ ಸಂಘದ ವಿವಿಧ ನಿಯಮಗಳನ್ನು ಉಲ್ಲಂಘಿಸಿವೆ ಮತ್ತು ಮಂಡಳಿಯ ಕಾರ್ಯಚಟುವಟಿಕೆಯ ಮೇಲೆ ಪರಿಣಾಮ ಬೀರಿವೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.