ನವದೆಹಲಿ:ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಪದಾಧಿಕಾರಿಗಳ ಅಧಿಕಾರದ ಅವಧಿ ವಿಸ್ತರಣೆ ಕುರಿತು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಬಿಸಿಸಿಐ ಅರ್ಜಿಯನ್ನು ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಬಿಸಿಸಿಐ ಅರ್ಜಿಯನ್ನು ವಿಚಾರಣೆ ನಡೆಸಲು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವನ್ನು ರಚಿಸಿ ಈ ಹಿಂದಿನ ಪೀಠದ ಜೊತೆಗೂಡಿ ಅರ್ಜಿ ವಿಚಾರಣೆಗೆ ಸೂಚಿಸಿದರು.
ಪ್ರಕರಣವೇನು?:ಪದಾಧಿಕಾರಿಗಳ ಅಧಿಕಾರವನ್ನು ವಿಸ್ತರಣೆ ಮಾಡಲು ಬಿಸಿಸಿಐ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಇದನ್ನು ಮಾನ್ಯ ಮಾಡಬೇಕು ಎಂದು ಕೋರಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ 2020 ರಲ್ಲಿ ಅರ್ಜಿ ಸಲ್ಲಿಸಿದೆ.