ಮುಂಬೈ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆಯಾಗುತ್ತಿದ್ದಂತೆ ಭವಿಷ್ಯದಲ್ಲಿ ಅವರು ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಕಪಿಲ್ ದೇವ್ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.
ಬರುವ ದಿನಗಳಲ್ಲೂ ರವಿಶಾಸ್ತ್ರಿ ಉತ್ತಮ ಫಲಿತಾಂಶ ನೀಡಿದರೆ ಅವರನ್ನು ಟೀಂ ಇಂಡಿಯಾ ಕೋಚ್ ಸ್ಥಾನದಿಂದ ತೆಗೆದುಹಾಕುವ ಅವಶ್ಯಕತೆ ಇಲ್ಲ ಎಂದು ಕಪಿಲ್ ದೇವ್ ಹೇಳಿದ್ದಾರೆ.
ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಕೋಚ್ ವಿಚಾರವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ರವಿಶಾಸ್ತ್ರಿ ಸದ್ಯ ಉತ್ತಮ ಫಲಿತಾಂಶ ನೀಡುತ್ತಿದ್ದಾರೆ. ಅವರನ್ನ ತೆಗೆದು ಹಾಕುವ ಯಾವುದೇ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದಿರುವ ಕಪಿಲ್ ದೇವ್, ತಂಡದಲ್ಲಿನ ಕೋಚ್ ಹಾಗೂ ಆಟಗಾರರ ಮೇಲೆ ಯಾವುದೇ ರೀತಿಯ ಒತ್ತಡ ಹಾಕಬಾರದು ಎಂದು ಹೇಳಿದ್ದಾರೆ.