ಮುಂಬೈ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ ದ್ವೀತಿಯಾರ್ಧದಲ್ಲಿ ರಾತ್ರೋರಾತ್ರಿ ಸ್ಟಾರ್ ಆದ ಯುವ ಪ್ರತಿಭೆ ವೆಂಕಟೇಶ್ ಅಯ್ಯರ್ಗೆ ಕೆಕೆಆರ್ ರಿಟೈನ್ ಮಾಡಿಕೊಂಡಿದ್ದು, ಇದಕ್ಕಾಗಿ ಬರೋಬ್ಬರಿ 8 ಕೋಟಿ ರೂ. ಖರ್ಚು ಮಾಡಿದೆ.
2021ರ ಐಪಿಎಲ್ ಹರಾಜಿನಲ್ಲಿ ಮೂಲ ಬೆಲೆ 20 ಲಕ್ಷ ರೂ. ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಯುವ ಆಲ್ರೌಂಡರ್ ವೆಂಕಟೇಶ್ ಅಯ್ಯರ್ಗೆ ಮಣೆ ಹಾಕಿತ್ತು. ಭಾರತದಲ್ಲಿ ನಡೆದ ಮೊದಲ ಆವೃತ್ತಿಯಲ್ಲಿ ಆಡುವ ಅವಕಾಶ ತಪ್ಪಿಸಿಕೊಂಡಿದ್ದ ಅಯ್ಯರ್, ತಂದನಂತರ ದುಬೈನಲ್ಲಿ ಆರ್ಸಿಬಿ ವಿರುದ್ಧ ನಡೆದ ದ್ವೀತಿಯಾರ್ಧದ ಪಂದ್ಯದಲ್ಲಿ ಅವಕಾಶ ಪಡೆದುಕೊಂಡಿದ್ದರು. ಈ ಪಂದ್ಯದಲ್ಲಿ ಕೇವಲ 27 ಎಸೆತಗಳಲ್ಲಿ 41ರನ್ಗಳಿಕೆ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಇದಾದ ಬಳಿಕ ಅನೇಕ ಪಂದ್ಯಗಳಲ್ಲಿ ಮಿಂಚಿ ತಂಡವನ್ನ ಗೆಲುವಿನ ದಢ ಸೇರಿಸಿದ್ದರು.