ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಆರಂಭಿಕ ಆಟಗಾರ, ಕನ್ನಡಿಗ ಕೆಎಲ್ ರಾಹುಲ್ ಬ್ಯಾಟಿಂಗ್ ವೈಫಲ್ಯ ಮುಂದುವರೆದಿದೆ. ಪಾಕ್ ವಿರುದ್ಧ ಕಳಪೆ ಆಟವಾಡಿದ್ದ ರಾಹುಲ್ ಇಂದು ನೆದರ್ಲ್ಯಾಂಡ್ಸ್ ಜೊತೆಗಿನ ಪಂದ್ಯದಲ್ಲೂ ಬಹುಬೇಗ ಪೆವಿಲಿಯನ್ ಸೇರಿಕೊಂಡಿದ್ದು, ಕ್ರಿಕೆಟ್ಪ್ರಿಯರ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಸಿಡ್ನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ರಾಹುಲ್ 12 ಎಸೆತಗಳಲ್ಲಿ 9 ರನ್ ಬಾರಿಸಿ ಔಟಾದರು. ಅವರ ಬ್ಯಾಟ್ನಿಂದ ಏಕೈಕ ಬೌಂಡರಿ ಮೂಡಿಬಂದಿತ್ತು.