ಬೆಂಗಳೂರು:ಶಸ್ತ್ರಚಿಕಿತ್ಸೆಗೊಳಗಾಗಿ ಗುಣಮುಖರಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದ ಕೆಎಲ್ ರಾಹುಲ್ಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಲಭ್ಯರಾಗುವುದು ದೌಟ್ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ತರಬೇತಿ ವೇಳೆ ಗಾಯಗೊಂಡಿರುವ ರವೀಂದ್ರ ಜಡೇಜಾ ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗ್ತಿದೆ.
ನಾಳೆ ಭಾರತ - ವೆಸ್ಟ್ ಇಂಡೀಸ್ ತಂಡಗಳ ಮಧ್ಯೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಮೊಣಕಾಲಿನ ನೋವಿಗೊಳಗಾಗಿರುವ ರವೀಂದ್ರ ಜಡೇಜಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ನಾಳೆಯ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಮುಂಬರುವ ಟಿ-20 ವಿಶ್ವಕಪ್ ದೃಷ್ಟಿಯಿಂದ ಜಡೇಜಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಇನ್ನೂ ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿರುವ ರಾಹುಲ್ಗೆ ಕೋವಿಡ್ ದೃಢಗೊಂಡಿದೆ. ಹೀಗಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಟಿ -20 ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗ್ತಿದೆ.