ಮುಂಬೈ :2022ರ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಗೊಳ್ಳಲಿರುವ ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಟೀಂ ಇಂಡಿಯಾ ಪ್ರಕಟಗೊಂಡಿದೆ. ಕನ್ನಡಿಗ ಕೆ ಎಲ್ ರಾಹುಲ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಭಾರತೀಯ ಆಯ್ಕೆ ಸಮಿತಿ 18 ಸದಸ್ಯರ ತಂಡ ಪ್ರಕಟಗೊಳಿಸಿದೆ. ಕೆಲ ಹೊಸ ಪ್ರತಿಭೆಗಳಿಗೆ ಮಣೆ ಹಾಕಿದೆ.
ಭಾರತ ತಂಡ ಇಂತಿದೆ :ಕೆ ಎಲ್ ರಾಹುಲ್(ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್(ವಿ,ಕೀ), ಇಶಾನ್ ಕಿಶನ್(ವಿ,ಕೀ), ಯಜುವೇಂದ್ರ ಚಹಲ್, ಆರ್.ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ(ಉ.ನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಟೀಂ ಇಂಡಿಯಾ ನಿಗದಿತ ಓವರ್ಗಳ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ನಾಯಕತ್ವ ಜವಾಬ್ದಾರಿ ಇದೀಗ ರಾಹುಲ್ ಹೆಗಲಿಗೆ ಬಿದ್ದಿದೆ. ಉಪನಾಯಕನಾಗಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಆಯ್ಕೆಯಾಗಿದ್ದಾರೆ.