ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಐದು ಟಿ-20 ಪಂದ್ಯಗಳ ಸರಣಿಯಿಂದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಕೋವಿಡ್ ಸೋಂಕಿಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಅವರು, ತಂಡದೊಂದಿಗೆ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿಲ್ಲ. ಹೀಗಾಗಿ, ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರು ಎನ್ಸಿಎನಲ್ಲಿ ತರಬೇತಿ ಶಿಬಿರದಲ್ಲಿ ರಾಹುಲ್ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಕೋವಿಡ್ ಕಾಣಿಸಿಕೊಂಡಿದೆ. ಹೀಗಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆಂದು ವರದಿಯಾಗಿದೆ. ಜುಲೈ 29ರಿಂದ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಆರಂಭಗೊಳ್ಳಲಿದ್ದು, ರೋಹಿತ್ ಶರ್ಮಾ ಬಳಗ ಕಣಕ್ಕಿಳಿಯಲಿದೆ.