ಪಾರ್ಲ್(ದಕ್ಷಿಣ ಆಫ್ರಿಕಾ) :ಟೀಂ ಇಂಡಿಯಾ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ರನ್ ಬರ ಎದುರಿಸುತ್ತಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಕೋಚ್ ರಾಹುಲ್ ದ್ರಾವಿಡ್ ನಿರ್ಮಿಸಿದ್ದ ಬೇಡದ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಕೇಶವ್ ಮಹಾರಾಜ್ ಎಸೆದ ಓವರ್ನಲ್ಲಿ ಬವುಮಾಗೆ ಸುಲಭ ಕ್ಯಾಚ್ ನೀಡಿ, ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸಿದರು. ಈ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ 14 ಸಲ ಶೂನ್ಯಕ್ಕೆ ವಿಕೆಟ್ ಒಪ್ಪಿಸಿರುವ ಅನಗತ್ಯ ದಾಖಲೆ ಬರೆದಿದ್ದಾರೆ. ಜೊತೆಗೆ 50 ಓವರ್ಗಳ ಕ್ರಿಕೆಟ್ನಲ್ಲಿ ಸ್ಪಿನ್ನರ್ ಓವರ್ನಲ್ಲಿ ಮಾಜಿ ಕ್ಯಾಪ್ಟನ್ ರನ್ಗಳಿಕೆ ಮಾಡದೇ ವಿಕೆಟ್ ನೀಡಿರುವುದು ಇದೇ ಮೊದಲ ಸಲ ಆಗಿದೆ.
ಇದನ್ನೂ ಓದಿರಿ:2022ರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರಾ ರಾಹುಲ್-ಆಥಿಯಾ ಶೆಟ್ಟಿ?
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಹರಿಣಗಳ ತಂಡ ಮೊದಲ ಪಂದ್ಯದಲ್ಲಿ ಗೆಲುವು ದಾಖಲು ಮಾಡಿದ್ದು, ಇಂದಿನ ಪಂದ್ಯ ರಾಹುಲ್ ಪಡೆಗೆ ಮಾಡು ಇಲ್ಲವೇ ಮಡಿ ಆಗಿದೆ. ಈ ಮಹತ್ವಪೂರ್ಣ ಪಂದ್ಯದಲ್ಲಿ ವಿರಾಟ್ ಸುಲಭ ವಿಕೆಟ್ ಒಪ್ಪಿಸಿದ್ದಾರೆ.