ಕರ್ನಾಟಕ

karnataka

ETV Bharat / sports

ಉಪನಾಯಕ ಸ್ಥಾನದಿಂದ ರೋಹಿತ್ ಕೆಳಗಿಳಿಸುವಂತೆ ಕೊಹ್ಲಿ ಮನವಿ ಮಾಡಿದ್ರಾ? - ಏಕದಿನ ಉಪನಾಯಕ ರೋಹಿತ್​

ಟಿ-20 ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಣೆ ಮಾಡಿರುವ ವಿರಾಟ್​​ ಕೊಹ್ಲಿ, ಭಾರತೀಯ ಕ್ರಿಕೆಟ್​​ನ ಆಯ್ಕೆ ಮಂಡಳಿ ಮುಂದೆ ಮತ್ತೊಂದು ಮಹತ್ವದ ವಿಚಾರ ಚರ್ಚೆ ಮಾಡಿದ್ದರು ಎಂಬ ವಿಷಯ ಬಹಿರಂಗವಾಗಿದೆ.

Rohit-Kohli
Rohit-Kohli

By

Published : Sep 17, 2021, 5:13 PM IST

ಹೈದರಾಬಾದ್​:ದುಬೈನಲ್ಲಿ ಆಯೋಜನೆಗೊಂಡಿರುವ ಐಸಿಸಿ ಟಿ-20 ವಿಶ್ವಕಪ್​ ಮುಕ್ತಾಯಗೊಳ್ಳುತ್ತಿದ್ದಂತೆ ಚುಟುಕು ಕ್ರಿಕೆಟ್​​ ನಾಯಕತ್ವದಿಂದ ತಾವು ಕೆಳಗಿಳಿಯುವುದಾಗಿ ವಿರಾಟ್​ ಕೊಹ್ಲಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಮುಂದೆ ಮತ್ತೊಂದು ಮಹತ್ವದ ವಿಚಾರ ಚರ್ಚಿಸಿದ್ದರು ಎಂಬ ವಿಷಯ ಇದೀಗ ಬಹಿರಂಗಗೊಂಡಿದೆ.

ಏಕದಿನ ಕ್ರಿಕೆಟ್​ನಲ್ಲಿ ಉಪನಾಯಕನಾಗಿರುವ 34 ವರ್ಷದ ರೋಹಿತ್​ ಶರ್ಮಾ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಿ, ಕನ್ನಡಿಗ ಕೆ.ಎಲ್.ರಾಹುಲ್​ಗೆ ನೀಡುವಂತೆ ಕೇಳಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇದರ ಜೊತೆಗೆ ಟಿ-20 ಕ್ರಿಕೆಟ್​ನಲ್ಲಿ ಉಪನಾಯಕನ ಸ್ಥಾನವನ್ನು ರಿಷಭ್​ ಪಂತ್​ಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ರೋಹಿತ್ ಶರ್ಮಾ ಅವರಿಗೆ ಈಗಾಗಲೇ 34 ವರ್ಷ ವಯಸ್ಸಾಗಿರುವ ಕಾರಣ ಅವರನ್ನು ಏಕದಿನ ಕ್ರಿಕೆಟ್​ನಲ್ಲಿ ಉಪನಾಯಕ ಸ್ಥಾನದಿಂದ ತೆಗೆದುಹಾಕುವಂತೆ ಪ್ರಸ್ತಾಪ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ: ಭದ್ರತಾ ಕಾರಣಕ್ಕೆ ನ್ಯೂಜಿಲ್ಯಾಂಡ್‌-ಪಾಕ್‌ ಕ್ರಿಕೆಟ್‌ ಸರಣಿ ರದ್ದು

ಟಿ-20 ಕ್ರಿಕೆಟ್​ನಲ್ಲಿ ರೋಹಿತ್​ ಶರ್ಮಾಗೆ ನಾಯಕತ್ವ ಜವಾಬ್ದಾರಿ ನೀಡಿದರೆ, ರಿಷಭ್​ ಪಂತ್​, ಕೆ.ಎಲ್​.ರಾಹುಲ್​ ಹಾಗೂ ಜಸ್ಪ್ರೀತ್ ಬುಮ್ರಾ ಉಪನಾಯಕ ಸ್ಥಾನಕ್ಕೆ ಸ್ಪರ್ಧಿಗಳಾಗಿದ್ದು, ಅವರಿಗೆ ಮಣೆ ಹಾಕುವಂತೆ ತಿಳಿಸಿದ್ದರು ಎನ್ನಲಾಗಿದೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ? ಎಂಬುದು ಇಲ್ಲಿಯವರೆಗೆ ಗೊತ್ತಾಗಿಲ್ಲ. ಆದರೆ ಕ್ರಿಕೆಟ್​ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.

ಟಿ-20 ಹಾಗೂ ಏಕದಿನ ಕ್ರಿಕೆಟ್​ನಲ್ಲಿ ವಿರಾಟ್​ ಕೊಹ್ಲಿ ವಿಶ್ರಾಂತಿ ಪಡೆದುಕೊಂಡ ಸಂದರ್ಭದಲ್ಲಿ ನಾಯಕತ್ವ ಜವಾಬ್ದಾರಿ ವಹಿಸಿಕೊಂಡಿರುವ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೋಡಿದ್ದು, ಅನೇಕ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲ್ಲಿಸಿದ್ದಾರೆ. ಇದರ ಜೊತೆಗೆ ಐಪಿಎಲ್​​ನಲ್ಲಿ ಮುಂಬೈ ತಂಡದ ಕ್ಯಾಪ್ಟನ್​ ಆಗಿ ಮಹತ್ವದ ಸಾಧನೆ ಮಾಡಿದ್ದಾರೆ.

ABOUT THE AUTHOR

...view details