ದುಬೈ:ಐಸಿಸಿ ಟಿ-20 ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ರಿಲೀಸ್ ಆಗಿದ್ದು, ಟೀಂ ಇಂಡಿಯಾ ಆರಂಭಿಕ ಆಟಗಾರ ಕೆ.ಎಲ್ ರಾಹುಲ್ 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ 5ನೇ ಸ್ಥಾನಕ್ಕೆ ಮರಳಿದ್ದಾರೆ.
ಇಂಗ್ಲೆಂಡ್ನ ಡೇವಿಡ್ ಮಲನ್ (888 ಪಾಯಿಂಟ್), ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್(830 ಪಾಯಿಂಟ್) ಪಾಕಿಸ್ತಾನ ಕ್ಯಾಪ್ಟನ್ ಬಾಬರ್ ಆಜಂ (828 ಪಾಯಿಂಟ್) ಹಾಗೂ ನ್ಯೂಜಿಲ್ಯಾಂಡ್ನ ಓಪನರ್ ಕಾನ್ವೆ(774 ಪಾಯಿಂಟ್) ಮೊದಲ ನಾಲ್ಕು ಸ್ಥಾನದಲ್ಲಿದ್ದು, 762 ಪಾಯಿಂಟ್ನೊಂದಿಗೆ ವಿರಾಟ್ ಕೊಹ್ಲಿ ನಂತರದ ಸ್ಥಾನದಲ್ಲಿದ್ದಾರೆ. ಉಳಿದಂತೆ ರಾಹುಲ್ 743 ಪಾಯಿಂಟ್ ಹೊಂದಿದ್ದು, 6ನೇ ಸ್ಥಾನದಲ್ಲಿದ್ದಾರೆ.