ದುಬೈ :ಇಂಡಿಯನ್ ಪ್ರೀಮಿಯರ್ ಲೀಗ್ನ ಇಂದಿನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿಯಾಗಲಿವೆ. ಟಾಸ್ ಗೆದ್ದಿರುವ ಪಂಜಾಬ್ ಬೌಲಿಂಗ್ ಆಯ್ದುಕೊಂಡಿದೆ. ಪ್ಲೇ-ಆಫ್ ರೇಸ್ನಲ್ಲಿ ಉಳಿದುಕೊಳ್ಳುವ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ಪ್ರಮುಖವಾಗಿದೆ.
ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದೆ. ಪ್ಲೇ-ಆಫ್ ರೇಸ್ನಲ್ಲಿ ಉಳಿದುಕೊಳ್ಳಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವುದು ಎರಡೂ ತಂಡಗಳಿಗೆ ಅನಿವಾರ್ಯ. ಹೀಗಾಗಿ, ಹೊಸ ಯೋಜನೆಗಳೊಂದಿಗೆ ತಂಡಗಳು ಮೈದಾನಕ್ಕಿಳಿದಿವೆ.
ಪಾಯಿಂಟ್ಸ್ ಪಟ್ಟಿಯಲ್ಲಿ ಕೋಲ್ಕತ್ತಾ 4ನೇ ಸ್ಥಾನದಲ್ಲಿದ್ದರೆ, ಪಂಜಾಬ್ 6ನೇ ಸ್ಥಾನದಲ್ಲಿದೆ. ಪ್ಲೇ-ಆಫ್ ರೇಸ್ನಲ್ಲಿ ಉಳಿಯಬೇಕಾದರೆ ಕನ್ನಡಿಗ ರಾಹುಲ್ ನೇತೃತ್ವದ ಪಂಜಾಬ್ ತಂಡ ಉಳಿದ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸುವುದರ ಜತೆಗೆ ಉತ್ತಮ ರನ್ ರೇಟ್ ಸಂಪಾದಿಸಬೇಕಿದೆ.
11 ಪಂದ್ಯಳಿಂದ 10 ಅಂಕಗಳಿಕೆ ಮಾಡಿರುವ ಕೆಕೆಆರ್ ಉತ್ತಮ ನೆಟ್ ರನ್ರೇಟ್ ಹೊಂದಿದೆ. ಆದರೆ, ಮುಂಬೈ ಇಂಡಿಯನ್ಸ್ ಹೊರ ಹಾಕಿ ಮುಂದಿನ ಹಂತಕ್ಕೆ ಲಗ್ಗೆ ಹಾಕಬೇಕಾದರೆ ಉಳಿದಿರುವ 3 ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯ.