ರಾಜ್‌ಕೋಟ್: ವೇಗದ ಬೌಲರ್ ಕುಲ್‌ದೀಪ್ ಸೇನ್ ಅವರ ಐದು ವಿಕೆಟ್ ಮತ್ತು ಅಭಿಮನ್ಯು ಈಶ್ವರನ್ ಅವರ ಅಜೇಯ ಅರ್ಧಶತಕದ ನೆರವಿನಿಂದ ರೆಸ್ಟ್ ಆಫ್ ಇಂಡಿಯಾ ಮಂಗಳವಾರ 2019-20ರ ರಣಜಿ ಚಾಂಪಿಯನ್ ಸೌರಾಷ್ಟ್ರವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಇರಾನಿ ಕಪ್ ಕ್ರಿಕೆಟ್ ಟೂರ್ನಿಯನ್ನು ಗೆದ್ದುಕೊಂಡಿತು.
ಟಾಸ್ ಗೆದ್ದ ಶೇಷ ಭಾರತ (Rest of India) ತಂಡದ ನಾಯಕ ಹನುಮ ವಿಹಾರಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌರಾಷ್ಟ್ರ ತಂಡವು ಮೊದಲ ಇನಿಂಗ್ಸ್ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತ್ತು. ರೆಸ್ಟ್ ಆಫ್ ಇಂಡಿಯಾ ತಂಡದ ವೇಗಿಗಳಾದ ಮುಖೇಶ್ ಕುಮಾರ್, ಉಮ್ರಾನ್ ಮಲಿಕ್ ಹಾಗೂ ಕುಲ್ದೀಪ್ ಸೇನ್ ದಾಳಿಗೆ ತತ್ತರಿಸಿದ ಸೌರಾಷ್ಟ್ರ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 98 ರನ್ಗಳಿಗೆ ಆಲೌಟ್ ಆಗಿತ್ತು.
ಆ ಬಳಿಕ ಮೊದಲ ಇನಿಂಗ್ಸ್ ಆಡಿದ್ದ ಶೇಷ ಭಾರತ ತಂಡದ ಪರ ಸರ್ಫರಾಜ್ ಖಾನ್ (138) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದ ನೆರವಿನಿಂದ ಶೇಷ ಭಾರತ ತಂಡವು 374 ರನ್ಗಳನ್ನು ಕಲೆಹಾಕಿತು. ಮೊದಲ ಇನಿಂಗ್ಸ್ನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.