ಮುಂಬೈ :ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯ ಅನಿರ್ದಿಷ್ಟ ಉಲ್ಲಂಘನೆ ಮಾಡಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ ಎಲ್ ರಾಹುಲ್ಗೆ ಅವರ ಪಂದ್ಯದ ಸಂಭಾವನೆಯ ಶೇ.20ರಷ್ಟನ್ನು ದಂಡವಾಗಿ ಪಾವತಿಸಬೇಕಾಗಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಎಲ್ಎಸ್ಜಿ 18 ರನ್ಗಳ ಸೋಲು ಕಂಡಿತ್ತು.
ಈ ಪಂದ್ಯದಲ್ಲಿ ರಾಹುಲ್ ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಅನ್ನು ಉಲ್ಲಂಘನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆಂದು ಐಪಿಎಲ್ ಹೇಳಿಕೆ ಬಿಡುಗಡೆ ಮಾಡಿದೆ. ರಾಹುಲ್ ಟೀಮ್ಮೇಟ್ ಆಲ್ ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಇದೇ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.