ಬೆಂಗಳೂರು:ಮಳೆ ಬಾಧಿತ ಕೊನೆಯ ಲೀಗ್ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್ ಅಂತರದ ಜಯದೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ತಂಡವು ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯಿಂದ ನಿರ್ಗಮಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮನೀಶ್ ಪಾಂಡೆ ನಾಯಕತ್ವದ ಗುಲ್ಬರ್ಗ ಮಿಸ್ಟಿಕ್ಸ್ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತ್ತು. ಗುಲ್ಬರ್ಗ ಪರ ಜಸ್ವಂತ್ ಆಚಾರ್ಯ 22 ಮತ್ತು ರಿತೇಶ್ ಭಟ್ಕಳ್ 38 ರನ್ ಗಳಿಸಿದ್ದೇ ಗರಿಷ್ಠ ಮೊತ್ತವಾಯಿತು. ಶಿವಮೊಗ್ಗ ಸ್ಟ್ರೈಕರ್ಸ್ ತಂಡದ ಅವಿನಾಶ್ 24 ರನ್ಗೆ 3 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿದರು.
ಅಲ್ಪ ಮೊತ್ತವನ್ನು ಬೆನ್ನಟ್ಟಿದ ಶಿವಮೊಗ್ಗ ತಂಡ 15 ರನ್ ಗಳಿಸುವಷ್ಟರಲ್ಲಿಯೇ 2 ವಿಕೆಟ್ ಕಳೆದುಕೊಂಡಿತ್ತು. ಅದೇ ಸಂದರ್ಭದಲ್ಲಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ನಂತರ ಶಿವಮೊಗ್ಗಕ್ಕೆ 54 ರನ್ ಗುರಿ ನೀಡಲಾಯಿತು. ಶಿವಮೊಗ್ಗ 6.3 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.