ನವದೆಹಲಿ:ಯುಎಇನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನ ಟೀಂ ಇಂಡಿಯಾಗೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಮಾರ್ಗದರ್ಶಕರಾಗಿ ನೇಮಕ ಮಾಡಲಾಗಿದೆ. ಕ್ರಿಕೆಟ್‌ನಲ್ಲಿನ ಅವರ ಅನುಭವ ತಂಡಕ್ಕೆ ನೆರವಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.
ಅಕ್ಟೋಬರ್ 17 ರಿಂದ ಆರಂಭವಾಗಲಿರುವ ಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸುವ ಭಾರತ ತಂಡಕ್ಕೆ ಧೋನಿ ಅವರನ್ನು ಮೆಂಟರ್ ಆಗಿ ನೇಮಕ ಮಾಡಿ ಬಿಸಿಸಿಐ ಅಚ್ಚರಿ ಮೂಡಿಸಿತ್ತು. ವಿಶ್ವಕಪ್ ಟೂರ್ನಿ ವೇಳೆ ಎಂಎಸ್‌ಡಿ ಅನುಭವ ತಂಡಕ್ಕೆ ನೆರವಾಗಲಿದೆ. ಬಿಸಿಸಿಐ ಆಹ್ವಾನವನ್ನು ಅವರು ಒಪ್ಪಿಕೊಂಡಿದ್ದಕ್ಕೆ ಗಂಗೂಲಿ ಧನ್ಯವಾದ ಹೇಳಿರುವುದಾಗಿ ಬಿಸಿಸಿಐ ಟ್ವೀಟ್ ಮಾಡಿದೆ.