ಮೆಲ್ಬೋರ್ನ್(ಆಸ್ಟ್ರೇಲಿಯಾ):ಸೆಪ್ಟೆಂಬರ್ 20ರಿಂದ ಆರಂಭಗೊಳ್ಳಲಿರುವ ಟಿಂ ಇಂಡಿಯಾ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಈಗಾಗಲೇ ಪ್ರಕಟಗೊಂಡಿದೆ. ಆದರೆ, ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ವೇಳೆ ಗಾಯಗೊಂಡಿರುವ ಮೂವರು ಪ್ರಮುಖ ಪ್ಲೇಯರ್ ಇದೀಗ ಮಹತ್ವದ ಸರಣಿಯಿಂದ ಹೊರಬಿದ್ದಿದ್ದಾರೆ.
ತಂಡದ ಪ್ರಮುಖ ಆಟಗಾರರಾದ ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್ ಹಾಗೂ ಮಾರ್ಕಸ್ ಸ್ಟೋಯ್ನಿಸ್ ಸರಣಿಯಿಂದ ಹೊರಗುಳಿಯಲಿದ್ದಾರೆಂದು ಕ್ರಿಕೆಟ್ ಆಸ್ಟ್ರೇಲಿಯಾ ಮಾಹಿತಿ ಹಂಚಿಕೊಂಡಿದೆ. ಮಿಚೆಲ್ ಸ್ಟಾರ್ಕ್ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದು, ಮಾರ್ಷ್ ಹಾಗೂ ಸ್ಟೋಯ್ನಿಸ್ ಕ್ರಮವಾಗಿ ಪಾದದ ಸಮಸ್ಯೆಗೊಳಗಾಗಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಮೂವರು ಪ್ಲೇಯರ್ಸ್ಗೆ ವಿಶ್ರಾಂತಿ ನೀಡಲಾಗಿದೆ.
ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಈಗಾಗಲೇ ಈ ಟೂರ್ನಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದೀಗ ಮತ್ತೆ ಮೂವರು ಪ್ಲೇಯರ್ಸ್ ಹೊರಗುಳಿಯತ್ತಿರುವ ಕಾರಣ, ತಂಡ ಮತ್ತಷ್ಟು ಸಂಕಷ್ಟಕ್ಕೊಳಗಾಗಿದೆ. ಇದೀಗ ಬದಲಿ ಆಟಗಾರರಾಗಿ ನಾಥನ್ ಎಲ್ಲಿಸ್, ಡೇನಿಯಲ್ ಸ್ಯಾಮ್ಸ್ ಹಾಗೂ ಸೀನ್ ಅಬಾಟ್ ತಂಡ ಸೇರಿಕೊಂಡಿದ್ದಾರೆ.
ಇದನ್ನೂ ಓದಿ:ICC T20 World Cup.. ಅಭ್ಯಾಸ ಪಂದ್ಯಗಳಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಜೊತೆ ಸೆಣಸಾಡಲಿದೆ ಭಾರತ