ನವದೆಹಲಿ :ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದರೂ ಅದರ ಭೀತಿ ಕಡಿಮೆಯಾಗಿಲ್ಲ. ಹೀಗಾಗಿ, ಭಾರತದಲ್ಲಿ ನಡೆಯಬೇಕಿದ್ದ ಟಿ-20 ವಿಶ್ವಕಪ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
ದೇಶದಲ್ಲಿ ಕೋವಿಡ್ ಪರಿಸ್ಥಿತಿಯಿಂದಾಗಿ, ನಾವು ಪಂದ್ಯಾವಳಿಯನ್ನು ಯುಎಇಗೆ ಸ್ಥಳಾಂತರಿಸಬಹುದು. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಆಟಗಾರರ ಆರೋಗ್ಯ ಮತ್ತು ಸುರಕ್ಷತೆಯು ಮುಖ್ಯವಾದದ್ದು, ನಾವು ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸಿಸುತ್ತೇವೆ ಎಂದಿದ್ದಾರೆ.