ಅಬುಧಾಬಿ: ಮುಂಬೈ ಇಂಡಿಯನ್ಸ್ ತಂಡದ ಪ್ರಬಲ ಬೌಲಿಂಗ್ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ತಂಡ ಐಡೆನ್ ಮಾರ್ಕ್ರಮ್ ಅವರ ಏಕಾಂಗಿ ಹೋರಾಟದ ಹೊರೆತಾಗಿಯೂ ಕೇವಲ ರೋಹಿತ್ ಪಡೆಗೆ 136ರನ್ಗಳ ಸಾಧಾರಣ ಗುರಿ ನೀಡಿದೆ.
ಎರಡೂ ತಂಡಗಳಿಗೂ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮುಂಬೈ ಬೌಲರ್ಗಳು ಆರಂಭದಿಂದಲೂ ಪಂಜಾಬ್ ಬ್ಯಾಟರ್ಗಳ ಮೇಲೆ ಒತ್ತಡ ಏರುವ ಮೂಲಕ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಮಯಾಂಕ್ ಅನುಪಸ್ಥಿತಿಯಲ್ಲಿ ರಾಹುಲ್ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಮಂದೀಪ್ ಸಿಂಗ್ ಕೇವಲ 15 ರನ್ಗಳಿಸಿ ಕೃನಾಲ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. 6ನೇ ಓವರ್ನಲ್ಲೇ ಕೀರನ್ ಪೊಲಾರ್ಡ್ ಕ್ರಿಸ್ ಗೇಲ್(1) ಮತ್ತು ಎದುರಾಳಿ ನಾಯಕ ರಾಹುಲ್(21) ರನ್ನು ಒಂದೇ ಓವರ್ನಲ್ಲಿ ಪೆವಿಲಿಯನ್ಗಟ್ಟಿದರು.