ಚೆನ್ನೈ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್ ಪಂದ್ಯ ಆರಂಭಗೊಂಡಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಚೆನ್ನೈನ ಎಂ. ಚಿದಂಬರಂ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದ್ದು, ಎರಡು ಪಂದ್ಯ ಕೈಚೆಲ್ಲಿರುವ ಡೆವಿಡ್ ವಾರ್ನರ್ ಪಡೆಗೆ ಈ ಪಂದ್ಯ ಮಹತ್ವದಾಗಿದೆ. ಜೊತೆಗೆ ಪಾಯಿಂಟ್ ಪಟ್ಟಿಯಲ್ಲಿ ಖಾತೆ ತೆರೆಯಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ.
ಆಡುವ 11ರ ಬಳಗ
ಸನ್ರೈಸರ್ಸ್ ಹೈದರಾಬಾದ್:ಡೇವಿಡ್ ವಾರ್ನರ್(ಕ್ಯಾಪ್ಟನ್), ಬೈರ್ಸ್ಟೋವ್(ವಿ.ಕೀ), ಮನೀಷ್ ಪಾಂಡೆ, ವಿರಾಟ್ ಸಿಂಗ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ರಾಶೀದ್ ಖಾನ್, ಭುವನೇಶ್ವರ್ ಕುಮಾರ್, ಮುಜ್ಬೀರ್ ಉರ್ ರೆಹಮಾನ್, ಖಲೀಲ್ ಅಹ್ಮದ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ(ಕ್ಯಾಪ್ಟನ್), ಕ್ವಿಂಟನ್ ಡಿಕಾಕ್( ವಿ.ಕೀ), ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಹಾರ್ದಿಕ್ ಪಾಂಡ್ಯ, ಕಿರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ರಾಹುಲ್ ಚಹರ್, ಆಡಂ ಮಿಲ್ನೆ, ಜಸಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್
ಗೆಲ್ಲುವ ಇರಾದೆ ಇಟ್ಟುಕೊಂಡು ಕಣಕ್ಕಿಳಿದಿರುವ ಸನ್ರೈಸರ್ಸ್ ಹೈದರಾಬಾದ್ ತಂಡ ಇಂದಿನ ಪಂದ್ಯದಲ್ಲಿ ನಾಲ್ಕು ಬದಲಾವಣೆ ಮಾಡಿದ್ದು, ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಮೈಕ್ರೋ ಜಾನ್ಸೆನ್ ಬದಲಿಗೆ ಆಡ್ಯಂ ಮಿಲ್ನೆಗೆ ಅವಕಾಶ ನೀಡಲಾಗಿದೆ.