ದುಬೈ: ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಮಂಗಳವಾರ ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರಿ 2ನೇ ಶ್ರೇಯಾಂಕ ಪಡೆದುಕೊಂಡಿದ್ದಾರೆ. ಬೌಲರ್ ವಿಭಾಗದಲ್ಲಿ ಹಿರಿಯ ವೇಗಿ ಜೂಲನ್ ಗೋಸ್ವಾಮಿ ತಮ್ಮ 2ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಆಲ್ರೌಂಡರ್ ರ್ಯಾಂಕಿಂಗ್ನಲ್ಲಿ ದೀಪ್ತಿ ಶರ್ಮಾ ಒಂದು ಏರಿಕೆ ಕಂಡು 4ನೇ ಶ್ರೇಯಾಂಕಕ್ಕೆ ಬಡ್ತಿ ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಅಲಿಸಾ ಹೀಲಿ(750) ಅಗ್ರಸ್ಥಾನದಲ್ಲಿದ್ದಾರೆ. ಮಿಥಾಲಿ ರಾಜ್ 738 ಅಂಕಗಳನ್ನು ಹೊಂದಿದ್ದಾರೆ. ಮತ್ತೊಬ್ಬ ಭಾರತೀಯೆ ಸ್ಮೃತಿ ಮಂಧಾನ 710 ಆಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.