ದುಬೈ :ಭಾರತ ಬ್ಯಾಟರ್ಗಳಾದ ಮಿಥಾಲಿ ರಾಜ್ ಮತ್ತು ಸ್ಮೃತಿ ಮಂದಾನ ಮಂಗಳವಾರ ಐಸಿಸಿ ಬಿಡುಗಡೆ ಮಾಡಿರುವ ನೂತನ ಮಹಿಳಾ ಏಕದಿನ ಶ್ರೇಯಾಂಕದಲ್ಲಿ ಕ್ರಮವಾಗಿ 3 ಮತ್ತು 6ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆಲ್ರೌಂಡರ್ ದೀಪ್ತಿ ಶರ್ಮಾ ಐಸಿಸಿ ಮಹಿಳಾ ಏಕದಿನ ಶ್ರೇಯಾಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಮಿಥಾಲಿ 738 ಮತ್ತು ಸ್ಮೃತಿ 710 ಅಂಕಗಳನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾದ ಲಿಜೆಲ್ ಲೀ 761 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆಸೀಸ್ ಬ್ಯಾಟರ್ ಅಲಿಸಾ ಹೀಲಿ(750) 2ನೇ ಸ್ಥಾನದಲ್ಲಿದ್ದಾರೆ.
ಇತ್ತೀಚಿಗೆ ಐಸಿಸಿ ಏಕದಿನ ವಿಶ್ವಕಪ್ ಕ್ವಾಲಿಫೈಯರ್ನಲ್ಲಿ ಉತ್ತಮ ಪ್ರದರ್ಶನ ತೋರಿದ ವೆಸ್ಟ್ ಇಂಡೀಸ್ ತಂಡದ ಸ್ಟೆಫನೀ ಟೇಲರ್ ಮತ್ತು ಹೇಲೀ ಮ್ಯಾಥ್ಯೂಸ್ ಆಲ್ರೌಂಡರ್ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ.