ಕರಾಚಿ(ಪಾಕಿಸ್ತಾನ):ಮುಂಬರುವ ಟಿ-20 ವಿಶ್ವಕಪ್ ಟೂರ್ನಿಗೋಸ್ಕರ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟಗೊಂಡಿದೆ. ಈ ಹಿಂದೆ ಕೋಚ್ಗಳಾಗಿದ್ದ ಮಿಸ್ಬಾ ಉಲ್ ಹಕ್ ಹಾಗೂ ವಕಾರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಳೆದ ವರ್ಷ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡಿದ್ದ ಮೊಹಮ್ಮದ್ ಅಮೀರ್ ಇದೀಗ ತಮ್ಮ ನಿರ್ಧಾರ ಹಿಂಪಡೆದುಕೊಳ್ಳಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.
ಪಾಕ್‌ನ ಸುದ್ದಿವಾಹಿನಿವೊಂದು ಈ ಕುರಿತ ವರದಿ ಪ್ರಕಟಿಸಿದ್ದು, ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಬೌಲಿಂಗ್ ಕೋಚ್ ವಕಾರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಅಮೀರ್ ನಿವೃತ್ತಿ ಹಿಂಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದಾರೆಂದು ತಿಳಿಸಿದೆ. ಜತೆಗೆ ರಾಷ್ಟ್ರೀಯ ಕ್ರಿಕೆಟ್ಗೆ ಮರಳುವುದಾಗಿ ಘೋಷಿಸಿದ್ದಾರೆ ಎಂದಿದೆ.
29 ವರ್ಷದ ಅಮೀರ್ ಪಾಕಿಸ್ತಾನ ಪರ 36 ಟೆಸ್ಟ್, 61 ಏಕದಿನ ಮತ್ತು 50 ಟಿ20 ಪಂದ್ಯಗಳನ್ನಾಡಿದ್ದಾರೆ. ಎಲ್ಲ ಪಂದ್ಯಗಳಿಂದ 259 ವಿಕೆಟ್ ಪಡೆದುಕೊಂಡಿದ್ದಾರೆ. 2010ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಪಂದ್ಯವೊಂದರಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದಕ್ಕಾಗಿ 5 ವರ್ಷಗಳ ಕಾಲ ನಿಷೇಧಕ್ಕೊಳಗಾಗಿ ತಂದನಂತರ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದರು. ಆದರೆ ಕಳೆದ ವರ್ಷ ದಿಢೀರ್ ಆಗಿ ಕ್ರಿಕೆಟ್ನಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಇದೀಗ ಯೂಟರ್ನ್ ಹೊಡೆದಿದ್ದಾರೆ.
ಮಿಸ್ಬಾ ಮತ್ತು ಸಹಚರರು ತಂಡ ಬಿಟ್ಟರೆ ಮತ್ತೆ ಪಾಕ್ ಪರ ಆಡುವೆ ಎಂದಿದ್ದ ಅಮೀರ್