ಕರ್ನಾಟಕ

karnataka

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ತಂದೆ ನಿಧನ

By

Published : Oct 19, 2022, 9:30 AM IST

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ತಂದೆ ಮೊಹಮ್ಮದ್ ಯೂಸುಫ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು.

Former Indian cricketer Mohammad Azharuddin's father passed away
ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ತಂದೆ ನಿಧನ

ಹೈದರಾಬಾದ್: ಭಾರತದ ಮಾಜಿ ಕ್ರಿಕೆಟಿಗ ಮತ್ತು ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಹೆಚ್‌ಸಿಎ) ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಅವರ ತಂದೆ ಮೊಹಮ್ಮದ್ ಯೂಸುಫ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಂಗಳವಾರ ರಾತ್ರಿ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಬುಧವಾರ ಬಂಜಾರ ಹಿಲ್ಸ್‌ನಲ್ಲಿ ಪ್ರಾರ್ಥನೆಯ ನಂತರ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಮೊಹಮ್ಮದ್ ಅಜರುದ್ದೀನ್ ಭಾರತೀಯ ಕ್ರಿಕೆಟ್ ತಂಡದ ಓರ್ವ ಯಶಸ್ವಿ ನಾಯಕ ಮತ್ತು ಪ್ರಮುಖ ಆಟಗಾರರಾಗಿದ್ದರು. ಟೆಸ್ಟ್ ಪಂದ್ಯಗಳಲ್ಲಿ 22 ಶತಕ ಮತ್ತು ಏಕದಿನದಲ್ಲಿ 7 ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ, ಅವರು ಆಗಿನ ಸಮಯಲ್ಲಿನ ಅತ್ಯುತ್ತಮ ಫೀಲ್ಡರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದರು. ಬಳಿಕ ರಾಜಕೀಯಕ್ಕೂ ಪ್ರವೇಶಿಸಿದ ಅವರು 2009ರಲ್ಲಿ ಕಾಂಗ್ರೆಸ್ ಟಿಕೆಟ್‌ ಪರ ಮೊರಾದಾಬಾದ್‌ನಿಂದ ಸಂಸದರಾಗಿ ಆಯ್ಕೆಯಾದರು.

ಮೊಹಮ್ಮದ್ ಅಜರುದ್ದೀನ್ 2000ರಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಎದುರಿಸಿದ್ದರು. ಇದರಿಂದ ಆಜೀವ ನಿಷೇಧ ಹೇರಲಾಗಿತ್ತು. ಆದರೆ 12 ವರ್ಷಗಳ ಕಾಲ ನ್ಯಾಯಾಲಯದಲ್ಲಿ ಹೋರಾಡಿದ ನಂತರ ಅವರು ಅಂತಿಮವಾಗಿ ಗೆದ್ದರು. 2012ರಲ್ಲಿ ನ್ಯಾಯಾಲಯ ಅವರ ಮೇಲಿನ ಆಜೀವ ನಿಷೇಧ ಆದೇಶವನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ:ಬಿಸಿಸಿಐ ನೂತನ ಅಧ್ಯಕ್ಷ ರೋಜರ್​ ಬಿನ್ನಿ: ಇವರ ಅಂತಾಷ್ಟ್ರೀಯ ಕಿಕೆಟ್​ ಸಾಧನೆ ಇಲ್ಲಿದೆ

ABOUT THE AUTHOR

...view details