ಭೋಪಾಲ್(ಮಧ್ಯಪ್ರದೇಶ):ಟಿ20 ವಿಶ್ವಕಪ್ನಲ್ಲಿ ಅಕ್ಟೋಬರ್ 23ರಂದು ಭಾರತ ತಂಡದ ವಿರುದ್ಧ ಜಯಭೇರಿ ಬಾರಿಸಿದ ಪಾಕಿಸ್ತಾನ ತಂಡದ ಪರ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿದ ಆರೋಪದಡಿ ಮಧ್ಯಪ್ರದೇಶದ ಸಾತ್ನಾ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದು, ದೇಶದ್ರೋಹ (ಐಪಿಸಿ ಸೆಕ್ಷನ್ 124-A) ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ಸಾತ್ನಾ ಜಿಲ್ಲೆಯ ವಿಶ್ವ ಹಿಂದು ಪರಿಷತ್(VHP) ಕಾರ್ಯದರ್ಶಿ ಅನುರಾಗ್ ಮಿಶ್ರಾ ಮತ್ತು ಇತರರು ನೀಡಿದ ದೂರಿನ ಆಧಾರದ ಮೇಲೆ ಮೈಹಾರ್ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯನ್ನು ಮೊಹಮ್ಮದ್ ಫರೂಕ್ (23) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 124-ಎ (ದೇಶದ್ರೋಹ), 153-ಬಿ(ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ), 504( ಉದ್ದೇಶಪೂರ್ವಕವಾಗಿ ಶಾಂತಿ ಭಂಗ ಪ್ರಯತ್ನ) ಮತ್ತು 505(ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೈಹಾರ್ ಉಪವಿಭಾಗದ ಪೊಲೀಸ್ ಅಧಿಕಾರಿ ಹಿಮಾಲಿ ಸೋನಿ ಪಿಟಿಐಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.