ಹೈದರಾಬಾದ್: ಐಪಿಎಲ್-2021 ಅನ್ನು ಕೋವಿಡ್ ಕಾರಣದಿಂದ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಹೀಗಾಗಿ ಈ ಸಮಯವನ್ನು ಸದುಪಯೊಗ ಮಾಡಿಕೊಳ್ತಿರುವ ಭಾರತದ ಮಾಜಿ ನಾಯಕ ಹಾಗೂ ಸಿಎಸ್ಕೆ ತಂಡದ ಕ್ಯಾಪ್ಟನ್ ಎಂ.ಎಸ್. ಧೋನಿ ಸದ್ಯ ಕುಟುಂಬದ ಜೊತೆ ಹಾಯಾಗಿ ಕಾಲ ಕಳೆಯುತ್ತಿದ್ದಾರೆ.
ಇತ್ತೀಚೆಗೆ ಧೋನಿ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಆಗಾಗ ಕೆಲವು ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಖುಷಿ ಹಂಚುತ್ತಿದ್ದಾರೆ. ತಾವು ಖರೀದಿ ಮಾಡಿದ ಹೊಸ ಕುದುರೆ ಜೊತೆ ಓಡುವ ವಿಡಿಯೋವನ್ನು ಅವರು ಇತ್ತೀಚೆಗೆ ಹಂಚಿಕೊಂಡಿದ್ದರು.