ಚೆನ್ನೈ:ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದು, ಈ ವೇಳೆ ಧೋನಿ ಕೂಡ ಅದರಲ್ಲಿ ಇದ್ದರು ಎಂದು ಸುದ್ದಿ ಪ್ರಸಾರ ಮಾಡಿದ್ದ ಖಾಸಗಿ ವಾಹಿನಿ ವಿರುದ್ಧ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಧೋನಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು. ಇದೀಗ ಮದ್ರಾಸ್ ಹೈಕೋರ್ಟ್ ಆ ಪ್ರಕರಣದ ವಿಚಾರಣೆ ಆಲಿಸಿದ ನಂತರ ಎರಡು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಕೂಡ ಇದರಲ್ಲಿ ಭಾಗಿಯಾಗಿದ್ದರು ಎಂದು ಖಾಸಗಿ ಸುದ್ದಿವಾಹಿನಿ ವರದಿ ಪ್ರಸಾರ ಮಾಡಿತ್ತು. ಹೀಗಾಗಿ ಧೋನಿ ಅದರ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್. ಶೇಷೈ ಪ್ರಕರಣದ ವಾದ - ವಿವಾದ ಆಲಿಸಿದ ನಂತರ ಎರಡು ವಾರಗಳ ಕಾಲ ಕೇಸ್ ಮುಂದೂಡಿಕೆ ಮಾಡಿದ್ದಾರೆ.