ಮುಂಬೈ (ಮಹರಾಷ್ಟ್ರ):ಐಪಿಎಲ್ ಫ್ರಾಂಚೈಸಿ ಮುಂಬೈ ಇಂಡಿಯನ್ಸ್‌ಗೆ ಕಳೆದ 9 ವರ್ಷಗಳ ಕಾಲ ಬೌಲಿಂಗ್ ಕೋಚ್ ಆಗಿ ಕೆಲಸ ಮಾಡಿದ ಶೇನ್ ಬಾಂಡ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಶ್ರೀಲಂಕಾದ ಮಾಜಿ ಆಟಗಾರ ಲಸಿತ್ ಮಾಲಿಂಗಾ ಅವರನ್ನು 2024ರ ಬೌಲಿಂಗ್ ಕೋಚ್ ಆಗಿ ನೇಮಿಸಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಮುಂಬೈ ಇಂಡಿಯನ್ ಬೌಲಿಂಗ್ ಮತ್ತು ಬ್ಯಾಟಿಂಗ್‌ನಿಂದ 5 ಬಾರಿ ಚಾಂಪಿಯನ್ ಆಗಿದೆ. ತಂಡ ನಾಲ್ಕು ಬಾರಿ ಚಾಂಪಿಯನ್ ಪಟ್ಟ ಮುಡಿಗೇರಿಸಿದಾಗ ತಂಡದಲ್ಲಿ ಬೌಲಿಂಗ್ ಕೋಚ್ ಆಗಿ ಶೇನ್ ಬಾಂಡ್ ಕಾರ್ಯನಿರ್ವಹಿಸಿದ್ದರು. ಅಂತರರಾಷ್ಟ್ರೀಯ ಲೀಗ್ ಟಿ20ಯ ಉದ್ಘಾಟನಾ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಎಮಿರೇಟ್ಸ್‌ನ ಮುಖ್ಯ ತರಬೇತುದಾರರಾಗಿಯೂ ಕೆಲಸ ಮಾಡಿದ್ದರು.
ಮುಂಬೈ ಇಂಡಿಯನ್ಸ್ ಜತೆಗೆ ಶೇನ್ 2015 ರಿಂದ ತಮ್ಮ ಪ್ರಯಾಣ ಆರಂಭಿಸಿದ್ದರು. ಇವರ ಕೋಚಿಂಗ್ ಮೂಲಕ ತಂಡ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದೆ. ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಜೋಫ್ರಾ ಆರ್ಚರ್ ಅವರಂತಹ ಸ್ಟಾರ್ ಬೌಲರ್ಗಳನ್ನು ತಂಡದಲ್ಲಿ ಬೆಳೆಸಿದ್ದರು. ಮುಂಬೈ ಇಂಡಿಯನ್ಸ್ 2015, 2017, 2019 ಮತ್ತು 2020 ರಲ್ಲಿ ಚಾಂಪಿಯನ್ ಆಗಿದೆ. ಈ ವರ್ಷ ಸ್ಟಾರ್ ಬೌಲರ್ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಜೋಫ್ರಾ ಆರ್ಚರ್ ಅವರನ್ನು ಕಳೆದುಕೊಂಡು ಸಾಧಾರಣ ಪ್ರದರ್ಶನ ನೀಡಿತ್ತು.