ಕರಾಚಿ(ಪಾಕಿಸ್ತಾನ):2009ರಲ್ಲಿ ಪಾಕಿಸ್ತಾನದ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಭೀಕರ ಭಯೋತ್ಪಾದನಾ ದಾಳಿ ನಡೆದಿತ್ತು. ಇದಾದ ಬಳಿಕ ಬಹುತೇಕ ತಂಡಗಳು ಇಲ್ಲಿಗೆ ಪ್ರವಾಸ ಕೈಗೊಳ್ಳಲು ಹಿಂದೇಟು ಹಾಕಿದ್ದವು. ಆದರೆ, ಕಳೆದ ಎರಡು ವರ್ಷದಿಂದ ಇತ್ತೀಚೆಗೆ ಕೆಲ ತಂಡಗಳು ಇಲ್ಲಿಗೆ ಪ್ರಯಾಣ ಕೈಗೊಳ್ಳುತ್ತಿದ್ದು, ಸದ್ಯ ನ್ಯೂಜಿಲ್ಯಾಂಡ್ ಕೂಡ ಪಾಕ್ ಪ್ರವಾಸ ಕೈಗೊಂಡಿದೆ.
ಬರೋಬ್ಬರಿ 18 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ತಂಡ ಪಾಕ್ ಪ್ರವಾಸ ಕೈಗೊಂಡಿದೆ. ರಾವಲ್ಪಿಂಡಿ ಹಾಗೂ ಲಾಹೋರ್ನಲ್ಲಿ ಮೂರು ಏಕದಿನ ಹಾಗೂ ಐದು ಟಿ-20 ಪಂದ್ಯಗಳ ಸರಣಿಯಲ್ಲಿ ಭಾಗಿಯಾಗಲಿದೆ.
ನ್ಯೂಜಿಲ್ಯಾಂಡ್ ತಂಡ ಪಾಕ್ಗೆ ಬಂದಿಳಿಯುತ್ತಿದ್ದಂತೆ ಭಾರೀ ಭದ್ರತೆಯಲ್ಲಿ ಹೋಟೆಲ್ಗೆ ಕರೆತರಲಾಗಿದೆ. ಇಂದಿನಿಂದಲೇ ಎಲ್ಲ ಪ್ಲೇಯರ್ಸ್ ಬಯೋಬಬಲ್ಗೊಳಪಡುವ ಸಾಧ್ಯತೆ ದಟ್ಟವಾಗಿದೆ.