ಜೈಪುರ: ಬುಧವಾರ ನಡೆದ ಭಾರತದ ವಿರುದ್ಧದ ಮೊದಲ ಟಿ20(Ind vs NZ first T20I) ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ನ್ಯೂಜಿಲ್ಯಾಂಡ್(New Zealand) ತಂಡದ ಮಾರ್ಕ್ ಚಾಪ್ಮನ್(Mark Chapman ) ವಿಶೇಷ ದಾಖಲೆಗೆ ಪಾತ್ರರಾಗಿದ್ದಾರೆ.
ಕಿವೀಸ್ನ ಬ್ಯಾಟರ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 50 ಎಸೆತಗಳಲ್ಲಿ 63 ರನ್ ಸಿಡಿಸಿ ತಂಡ 165 ರನ್ಗಳ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾಗಿದ್ದರು. ಆದರೆ ಈ ಪಂದ್ಯದಲ್ಲಿ ಅರ್ಧಶತಕ ದಾಖಲಿಸುವ ಮೂಲಕ ಎರಡೂ ದೇಶಗಳ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿ ಅರ್ಧಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.