ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ಭಾರತದಲ್ಲಿ ನಡೆಯುವ ವಿಶ್ವಕಪ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ನ್ಯೂಜಿಲೆಂಡ್ನ ಅನುಭವಿ ಬ್ಯಾಟರ್ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡು ವಿಶ್ವಕಪ್ ವೇಳೆಗೆ ತಂಡ ಸೇರಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಮೈದಾನದಲ್ಲಿ ಅಭ್ಯಾಸಕ್ಕಿಳಿದಿರುವ ಅವರು ಮಹತ್ವದ ಸರಣಿಗೆ ತಂಡದ ಸಂಪೂರ್ಣ ಪಾಲುದಾರಿಕೆ ಪಡೆಯಲಿದ್ದಾರೆ.
2023ರ ಐಪಿಎಲ್ನ ಉದ್ಘಾಟನಾ ಪಂದ್ಯದ ವೇಳೆ ಕೇನ್ ಬೌಂಡರಿ ಲೈನ್ನಲ್ಲಿ ಫೀಲ್ಡಿಂಗ್ ಮಾಡುವಾಗ ಬಿದ್ದು ಗಾಯಕ್ಕೆ ತುತ್ತಾಗಿದ್ದರು. ನಂತರ ಚಿಕಿತ್ಸೆ ಪಡೆದುಕೊಂಡ ಅವರು ಕಮ್‌ಬ್ಯಾಕ್ ಮಾಡಲು ಕಠಿಣ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ವಿಲಿಯಮ್ಸನ್ ವಿಶ್ವಕಪ್ ವೇಳೆಗೆ ತಂಡವನ್ನು ಪ್ರತಿನಿಧಿಸುವ ಬಗ್ಗೆ ಹೆಚ್ಚು ಉತ್ಸುಕರಾಗಿದ್ದಾರೆ. ನ್ಯೂಜಿಲೆಂಡ್ ತಂಡ ವಿಶ್ವಕಪ್ಗೂ ಮೊದಲು ಬಾಂಗ್ಲಾದೇಶ ಪ್ರವಾಸ ಮಾಡಲಿದೆ. ಈ ವೇಳೆ ನಡೆಯಲಿರುವ ಟಿ20 ಮತ್ತು ಏಕದಿನ ಪಂದ್ಯ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಇದೆ.
ವಿಲಿಯಮ್ಸನ್ ತಮ್ಮ ಚೇತರಿಕೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಭಾರತದಲ್ಲಿ ನಡೆಯುವ ವಿಶ್ವಕಪ್‌ಗೆ ತಯಾರಿ ಮಾಡುತ್ತಿರುವುದು ನನಗೆ ಕಠಿಣ ಸವಾಲು. ಉತ್ತಮವಾಗಿ ಚೇತರಿಕೆ ಕಾಣುತ್ತಿದ್ದೇನೆ. ಮೈದಾನದಲ್ಲಿ ಹೆಚ್ಚು ಹೊತ್ತು ನಿಂತು ಆಡಲು ಸಾಧ್ಯವಾಗುತ್ತಿದೆ. ಗಾಯವಾದ ಮೊಣಕಾಲಿನಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಬೇಕಿದೆ ಅಷ್ಟೇ, ಚಲನೆಗೆ ಯಾವುದೇ ಸಮಸ್ಯೆ ಇಲ್ಲ. ವಿಶ್ವಕಪ್ ತಂಡದಲ್ಲಿ ನನ್ನನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ" ಎಂದರು.