ಕರ್ನಾಟಕ

karnataka

ETV Bharat / sports

NZ vs IND 3rd T20I: ಭಾರತ-ನ್ಯೂಜಿಲೆಂಡ್ ಅಂತಿಮ ಟಿ20 ಪಂದ್ಯದಲ್ಲಿ ಮಳೆಯಾಟ ಸಾಧ್ಯತೆ

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯುತ್ತಿದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮಳೆಯಿಂದಾಗಿ ನಿಗದಿತ ಸಮಯಕ್ಕಿಂದ ಟಾಸ್ ವಿಳಂಬವಾಯಿತು.

New Zealand opt to bat against Team India
New Zealand opt to bat against Team India

By

Published : Nov 22, 2022, 12:26 PM IST

Updated : Nov 22, 2022, 12:56 PM IST

ನ್ಯೂಜಿಲೆಂಡ್:ನೇಪಿಯರ್‌ನಲ್ಲಿ ಇಂದು ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟಿ20 ಸರಣಿಯಲ್ಲಿ ಭಾರತ ಟಾಸ್ ಸೋತಿದ್ದು ಎದುರಾಳಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆಯಲ್ಲಿದ್ದು, ಮೂರನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿದೆ.

ಉಭಯ ತಂಡದ ನಡುವಿನ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಆ ಬಳಿಕ ಭಾರತ ಎರಡನೇ ಪಂದ್ಯದಲ್ಲಿ 65 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ದಾಂಡಿಗ ಸೂರ್ಯಕುಮಾರ್ ಯಾದವ್ 51 ಎಸೆತಗಳಲ್ಲಿ ಅಜೇಯ 111 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.

ಇಂದು ನಡೆಯುತ್ತಿರುವ 3ನೇ ಟಿ20 ಪಂದ್ಯದ ಮೇಲೂ ಮಳೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಟೀಂ ಇಂಡಿಯಾಗೆ ಸರಣಿ ವಶಪಡಿಸಿಕೊಳ್ಳುವ ಪ್ರಯತ್ನ ಸಫಲವಾಗುತ್ತಾ ಅನ್ನೋದನ್ನು ಕಾದುನೋಡಬೇಕು. ಇದೇ ವೇಳೆ, ಎರಡನೇ ಪಂದ್ಯದ ಸೋಲಿನ ಹತಾಶೆಯಲ್ಲಿರುವ ನ್ಯೂಜಿಲೆಂಡ್ ತಂಡ ಇಂದಿನ ಪಂದ್ಯ ಗೆದ್ದು ಸರಣಿ ಸಮಬಲ ಮಾಡಿಕೊಳ್ಳುತ್ತಾ ಅನ್ನೋದು ಈಗಿನ ಕುತೂಹಲ.

ಭಾರತ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಸ್ಥಾನ ಪಡೆದಿದ್ದು ನ್ಯೂಜಿಲೆಂಡ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯಲಿದೆ.

ನ್ಯೂಜಿಲೆಂಡ್ ತಂಡ:ಟಿಮ್ ಸೌಥಿ (ನಾಯಕ) ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್​ ಕೀಪರ್)​, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡಾರೆಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಇಶ್ ಸೋಧಿ, ಲಾಕಿ ಫರ್ಗುಸನ್

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರಿಷಬ್ ಪಂತ್ (ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್​ ಸಿರಾಜ್​

ಇದನ್ನೂ ಓದಿ:64 ವರ್ಷಗಳ ಬಳಿಕ ಕಣಕ್ಕಿಳಿದು ಜಿದ್ದಾಜಿದ್ದಿನ ಹೋರಾಟ ನಡೆಸಿದ ವೇಲ್ಸ್‌; ಪಂದ್ಯ ಡ್ರಾ

Last Updated : Nov 22, 2022, 12:56 PM IST

ABOUT THE AUTHOR

...view details