ಕರ್ನಾಟಕ

karnataka

ETV Bharat / sports

WTC ಫೈನಲ್​ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್​​ - ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌

ಜೂನ್ 18ರಿಂದ ಆರಂಭವಾಗುವ ಚಾಂಪಿಯನ್​​​ಶಿಪ್ ಫೈನಲ್ ಪಂದ್ಯಕ್ಕೆ15 ಸದಸ್ಯರನ್ನು ಒಳಗೊಂಡ ತಂಡವನ್ನು ಮುಖ್ಯ ಕೋಚ್ ಗ್ಯಾರಿ ಸ್ಟೀಡ್ ಪ್ರಕಟಿಸಿದ್ದಾರೆ.

New Zealand Test Team squad
ಬಲಿಷ್ಠ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್​​

By

Published : Jun 15, 2021, 1:41 PM IST

ಸೌತಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ವಿರುದ್ಧ ಸೆಣಸಾಡಲು ನ್ಯೂಜಿಲ್ಯಾಂಡ್​ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ನ್ಯೂಜಿಲ್ಯಾಂಡ್​ ತಂಡದ ನಾಯಕ ಕೇನ್​​ ವಿಲಿಯಮ್ಸ್​​ನ್​ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದು ಕಿವೀಸ್​ ಪಡೆಗೆ ಮತ್ತಷ್ಟು ಬಲ ಬಂದಂತಾಗಿದೆ.

ಜೂನ್ 18ರಿಂದ ಆರಂಭವಾಗುವ ಚಾಂಪಿಯನ್​​ಶಿಪ್ ಫೈನಲ್ ಪಂದ್ಯಕ್ಕೆ 15 ಸದಸ್ಯರನ್ನು ಒಳಗೊಂಡ ತಂಡವನ್ನು ಮುಖ್ಯ ಕೋಚ್ ಗ್ಯಾರಿ ಸ್ಟೀಡ್ ಪ್ರಕಟಿಸಿದ್ದಾರೆ. ಮೊಣಕೈ ಗಾಯದಿಂದಾಗಿ ವಿಲಿಯಮ್ಸನ್ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಪ್ರವಾಸಿ ಕಿವೀಸ್ ತಂಡ ಎರಡು ಪಂದ್ಯಗಳ ಐತಿಹಾಸಿ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಜಯಿಸಿತು.

ಬೆನ್ನಿನ ಗಾಯಕ್ಕೆ ತುತ್ತಾಗಿದ್ದ ವಿಕೆಟ್ ಕೀಪರ್ ಬಿ.ಜೆ.ವಾಟ್ಲಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ನ್ಯೂಜಿಲ್ಯಾಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲಥಾಮ್, ಹೆನ್ರಿ ನಿಕೋಲ್ಸ್, ಅಜಾಝ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್, ವಾಟ್ಲಿಂಗ್ ಹಾಗೂ ವಿಲ್ ಯಂಗ್.

ABOUT THE AUTHOR

...view details