ದುಬೈ: ಟಿ20 ವಿಶ್ವಕಪ್ನ ಕ್ವಾರ್ಟರ್ ಫೈನಲ್ಸ್ ಎಂದೇ ಬಿಂಬಿತವಾಗಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ನ್ಯೂಜಿಲ್ಯಾಂಡ್ ಕೀಪರ್ ಸೀಫರ್ಟ್ ಹೊರಗಿಟ್ಟು ಆ್ಯಡಂ ಮಿಲ್ನೆಯನ್ನು ಹೆಚ್ಚುವರಿ ಬೌಲರ್ ಆಗಿ ಆಯ್ಕೆ ಮಾಡಿಕೊಂಡಿದೆ. ಕೀಪಿಂಗ್ ಜವಾಬ್ದಾರಿಯನ್ನು ಕಾನ್ವೆ ನಿರ್ವಹಿಸಲಿದ್ದಾರೆ.
ಈ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿರುವ ಸೂರ್ಯಕುಮಾರ್ ಯಾದವ್ ಬದಲಿಗೆ ಇಶಾನ್ ಕಿಶನ್ ಅವಕಾಶ ಪಡೆದಿದ್ದಾರೆ. ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದುಲ್ ಠಾಕೂರ್ ಕಣಕ್ಕಿಳಿಯಲಿದ್ದಾರೆ. ಇಶಾನ್ ರೋಹಿತ್ ಜೊತೆಗೆ ಇನ್ನಿಂಗ್ಸ್ ಆರಂಭಿಸಲಿದ್ದು, ರಾಹುಲ್ 3 ಮತ್ತು ಕೊಹ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದಾರೆ.
ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ನಾಯಕ), ರಿಷಭ್ ಪಂತ್(ವಿಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಜೇಮ್ಸ್ ನೀಶಮ್, ಡೆವೊನ್ ಕಾನ್ವೇ(ವಿಕೀ), ಗ್ಲೇನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್