ವಡೋದರ: ಬಿಸಿಸಿಐ ಸೇರಿದಂತೆ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞರಾಗಿ ಗುರುತಿಸಿಕೊಂಡಿದ್ದ ದಿನಾರ್ ಗುಪ್ಟೆ ಇಂದು ಕೋವಿಡ್ 19ಗೆ ಬಲಿಯಾಗಿದ್ದಾರೆ ಎಂದು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ.
ಗುಪ್ಟೆ ತಮ್ಮ 76ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾರೆ. ಅವರು 1999ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಅಧಿಕೃತ ಸ್ಕೋರರ್ ಆಗಿ ಕಾರ್ಯ ನಿರ್ವಹಿಸಿದ್ದರು.
"ದಿನಾರ್ ಅವರು ವಡೋದರಾ ಮೂಲದವರು. ಕೋವಿಡ್ 19 ವಿರುದ್ಧ ಹೋರಾಡುತ್ತಿದ್ದ ಅವರು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು 1970ರಿಂದ ಬಿಸಿಸಿಐನಲ್ಲಿ ಅಂಕಿಅಂಶ ತಜ್ಞರಾಗಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು.