ಇಸ್ಲಾಮಾಬಾದ್:ಭದ್ರತೆಯ ಕಾರಣ ನೀಡಿ ಪಾಕಿಸ್ತಾನ ವಿರುದ್ಧದ ಕ್ರಿಕೆಟ್ ಸರಣಿ ರದ್ದುಪಡಿಸಿರುವ ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ ವಿರುದ್ಧ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾವಲ್ಪಿಂಡಿ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ಆರಂಭಗೊಳ್ಳಲು ಕೇವಲ 20 ನಿಮಿಷ ಬಾಕಿ ಇರುವಾಗಲೇ ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ ಭದ್ರತೆಯ ನೆಪವೊಡ್ಡಿ ಸರಣಿ ರದ್ದುಪಡಿಸುತ್ತಿರುವುದಾಗಿ ಘೋಷಣೆ ಮಾಡಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾವಲ್ಪಿಂಡಿ ಎಕ್ಸ್ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ಟ್ವೀಟ್ ಮಾಡಿದ್ದು, 'ನ್ಯೂಜಿಲ್ಯಾಂಡ್ ಪಾಕ್ ಕ್ರಿಕೆಟ್ ಕೊಲೆ ಮಾಡಿದೆ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರಣಿ ಮುಂದೂಡಿಕೆ ತೀವ್ರ ನಿರಾಸೆ ಮೂಡಿಸಿದೆ: ಬಾಬರ್ ಆಜಂ
ಲಕ್ಷಾಂತರ ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳ ಮುಖದಲ್ಲಿ ನಗು ತರಿಸಬಹುದಾದ ಸರಣಿ ಹಠಾತ್ ಆಗಿ ಮುಂದೂಡಿಕೆಯಾಗಿದ್ದು, ತೀವ್ರ ನಿರಾಸೆಯಾಗಿದೆ. ನಮ್ಮ ಭದ್ರತಾ ಸಂಸ್ಥೆಗಳ ಸಾಮರ್ಥ್ಯ ಮತ್ತು ವಿಶ್ವಾಸಾರ್ಹತೆಯ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಅವರು ನಮ್ಮ ಹೆಮ್ಮೆ. ಪಾಕಿಸ್ತಾನ ಜಿಂದಾಬಾದ್ ಎಂದು ಪಾಕ್ ಕ್ಯಾಪ್ಟನ್ ಬಾಬರ್ ಆಜಂ ಹೇಳಿದ್ದಾರೆ.