ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ ಅಂದರೆ ಡಬ್ಲ್ಯುಪಿಎಲ್‌ನ ಅಧಿಕೃತ ಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗೀತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಗಾಯಕ ಶಂಕರ್ ಮಹಾದೇವನ್, ನೀತಿ ಮೋಹನ್ ಮತ್ತು ಹರ್ದೀಪ್ ಕೌರ್ ಅವರು 'ಯೇ ತೋ ಬಾಸ್ ಶುರುವಾತಿ ಹೈ' ಗೀತೆಗೆ ಧ್ವನಿ ನೀಡಿದ್ದಾರೆ. ಎರಡು ನಿಮಿಷಗಳ ಈ ವಿಡಿಯೋದಲ್ಲಿ ದೀಪ್ತಿ ಶರ್ಮಾ, ಶೆಫಾಲಿ ವರ್ಮಾ ಸೇರಿದಂತೆ ಹಲವು ಕ್ರಿಕೆಟಿಗರು ಕಾಣಿಸಿಕೊಂಡಿದ್ದಾರೆ. ಮಹಿಳಾ ಕ್ರಿಕೆಟ್ ಬೆಳವಣಿಗೆಯನ್ನು ಗೀತೆಯಲ್ಲಿ ಚಿತ್ರಿಸಲಾಗಿದೆ.
ಬದಲಾದ WPLನ ಉದ್ಘಾಟನಾ ಸಮಯ:ಡಬ್ಲ್ಯುಪಿಎಲ್‌ನ ಮೊದಲ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೂ ಮುನ್ನ ಅದ್ಭುತ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗುತ್ತದೆ. ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬಿಸಿಸಿಐ ವಿಶೇಷ ಸಿದ್ಧತೆ ನಡೆಸಿದೆ. ಮೊದಲು ಉದ್ಘಾಟನಾ ಸಮಾರಂಭದ ಸಮಯ 5:30 ಆರಂಭಿಸುವುದು ಎಂದು ನಿರ್ಣಯಿಸಲಾಗಿತ್ತು. ಆದರೆ ಈಗ ಸಮಯ ಬದಲಾವಣೆ ಮಾಡಲಾಗಿದೆ. ಉದ್ಘಾಟನಾ ಸಮಾರಂಭವು 6:25 ರಿಂದ ಪ್ರಾರಂಭವಾಗಲಿದೆ. ಕೃತಿ ಸನೋನ್, ಕಿಯಾರಾ ಅಡ್ವಾಣಿ ಮತ್ತು ಗಾಯಕ ಎಪಿ ಧಿಲ್ಲೋನ್ ಉದ್ಘಾಟನಾ ಸಮಾರಂಭದಲ್ಲಿ ವರ್ಣರಂಜಿತ ಪ್ರದರ್ಶನ ನೀಡಲಿದ್ದಾರೆ. ಸಮಾರಂಭದ ನಂತರ 7:30 ಕ್ಕೆ ಟಾಸ್ ಮಾಡಲಾಗುವುದು ಎಂದು ಟ್ವಿಟರ್ನಲ್ಲಿ ತಿಳಿಸಲಾಗಿದೆ.
ಮೊದಲ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ:ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯ ಇಂದು ಬೆಳಿಗ್ಗೆ 8:00 ರಿಂದ ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜಿಸಲಾಗಿದೆ. ಮುಂಬೈ ಇಂಡಿಯನ್ಸ್‌ಗೆ ಹರ್‌ಪ್ರೀತ್ ಕೌರ್ ನಾಯಕತ್ವ ವಹಿಸಿದ್ದರೆ, ಗುಜರಾತ್ ಜೈಂಟ್ಸ್ ಆಸ್ಟ್ರೇಲಿಯಾದ ಬೆತ್ ಮೂನಿ ಮುಂದಾಳತ್ವದಲ್ಲಿ ನಡೆಯಲಿದೆ.