ಲಾಹೋರ್(ಪಾಕಿಸ್ತಾನ):ಮೂರನೇ ಮತ್ತು ಅಂತಿಮ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ ಆಸ್ಟ್ರೇಲಿಯಾವನ್ನು ಮಣಿಸಿದೆ. ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕ್ 9 ವಿಕೆಟ್‌ಗಳಿಂದ ಗೆಲುವಿನ ನಗೆ ಬೀರಿತು. ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ವಾಸಿಂ ತಲಾ ಮೂರು ವಿಕೆಟ್ ಪಡೆದರು.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆಯೊಂದಿಗೆ ಜಯ ಸಾಧಿಸಿರುವ ಪಾಕ್, ಏಕದಿನ ಸರಣಿ ತನ್ನದಾಗಿಸಿಕೊಂಡಿದೆ. ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದ ಪಾಕಿಸ್ತಾನವು ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಮತ್ತು ಆ್ಯರನ್ ಫಿಂಚ್ ಅವರನ್ನು ಶೂನ್ಯ ರನ್‌ಗಳಿಗೆ ಔಟ್ ಮಾಡಿತು. ಈ ಮೂಲಕ ಪ್ರವಾಸಿಗರಿಗೆ ಆರಂಭದಲ್ಲೇ ಬಲವಾದ ಪೆಟ್ಟು ನೀಡಿತು. ಆದರೂ ಅಲೆಕ್ಸ್ ಕೇರಿ 56, ಕ್ಯಾಮರೂನ್ ಗ್ರೀನ್ 34, ಸಿಯಾನ್ ಅಬ್ಬಾಟ್ 49, ಬೆನ್ ಮೆಕ್ಡೆರ್ಮೊಟ್ 36 ರನ್ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 41.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 210 ರನ್ ಗಳಿಸಲಷ್ಟೇ ಸಾಧ್ಯವಾಯಿತು.