ಕರಾಚಿ:ಪಾಕಿಸ್ತಾನದ ಎಡಗೈ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ ಗಾಯದಿಂದ ಚೇತರಿಸಿಕೊಂಡಿದ್ದಾರೆ. 17 ಮತ್ತು 19 ರಂದು ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಅವರ ಫಿಟ್ನೆಸ್ ಸಾಬೀತು ಪಡಿಸಲಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.
ಜುಲೈನಲ್ಲಿ ಮೊಣಕಾಲಿಗೆ ಗಾಯ ಮಾಡಿಕೊಂಡ ಅಫ್ರಿದಿ ಇಂಗ್ಲೆಂಡ್ನಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದರು. ಅಫ್ರಿದಿ ಶನಿವಾರ ಆಸ್ಟ್ರೇಲಿಯಾಕ್ಕೆ ಬಂದಿಳಿಯಲಿದ್ದಾರೆ. 17 ಮತ್ತು 19 ರಂದು ಕ್ರಮವಾಗಿ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಅವರ ಫಿಟ್ನೆಸ್ ಪರೀಕ್ಷಿಸಲಾಗುತ್ತದೆ.