ಹೈದರಾಬಾದ್:ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ಪಂಜಾಬ್ ಕಿಂಗ್ಸ್ ಸಹ ಮಾಲೀಕ ಪ್ರೀತಿ ಜಿಂಟಾ ಅವರೊಂದಿಗೆ ಪಾಕಿಸ್ತಾನದ ಮಾಜಿ ಬೌಲರ್ ಮೊಹಮ್ಮದ್ ಅಮೀರ್ ಫೋಟೋ ತೆಗೆದುಕೊಂಡಿದ್ದು, ಅದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಬಾಲಿವುಡ್ನಿಂದ ಮೈ ಆಲ್ ಟೈಮ್ ಫೇವರಿಟ್ ಎಂದು ಅವರು ಬರೆದುಕೊಂಡಿದ್ದಾರೆ.
ಮೊಹಮ್ಮದ್ ಅಮೀರ್ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಜಮೈಕಾ ತಲೈವಾಸ್ ಪ್ರತಿನಿಧಿಸುತ್ತಿದ್ದಾರೆ. ಪ್ರೀತಿ ಜಿಂಟಾ ಸೇಂಟ್ ಲೂಸಿಯಾ ಕಿಂಗ್ಸ್ನ ಸಹ ಮಾಲೀಕರೂ ಹೌದು. ನಿನ್ನೆ ಸೈಂಟ್ ಲೂಸಿಯಾದ ಗ್ರೋಸ್ ಐಲೆಟ್ನಲ್ಲಿ ಜಮೈಕಾ ತಲೈವಾಸ್ ಹಾಗೂ ಸೇಂಟ್ ಲೂಸಿಯಾ ಕಿಂಗ್ಸ್ ನಡುವೆ ಪಂದ್ಯ ನಡೆದಿತ್ತು. ಪ್ರೀತಿ ಜಿಂಟಾ ಪಂದ್ಯಕ್ಕೆ ಸಾಕ್ಷಿಯಾಗಿದ್ದರು. ಪಂದ್ಯ ಮುಕ್ತಾಯಗೊಂಡ ಬಳಿಕ ಮೊಹಮ್ಮದ್ ಅಮೀರ್ ಬಾಲಿವುಡ್ ನಟಿ ಪ್ರೀತಿ ಜೊತೆ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.