ಕ್ರೈಸ್ಟ್ಚರ್ಚ್:ನ್ಯೂಜಿಲ್ಯಾಂಡ್ ವಿರುದ್ಧದ ಕೊನೆಯ ಎರಡು ಪಂದ್ಯಗಳಿಂದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದಕ್ಕಾಗಿ ಕ್ರಿಕೆಟ್ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಕೊನೆಯ ಪಂದ್ಯದ ನಂತರ ಉತ್ತರಿಸಿರುವ ನಾಯಕ ಶಿಖರ್ ಧವನ್ ವಿಕೆಟ್ ಕೀಪರ್ ರಿಷಭ್ ಪಂತ್ ಮ್ಯಾಚ್ ವಿನ್ನರ್ ಆಗಿದ್ದಾರೆ, ಹೀಗಾಗಿ ಸಂಜು ಸ್ಯಾಮ್ಸನ್ ಇನ್ನೂ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ ಎಂದಿದ್ದಾರೆ.
ರಿಷಭ್ ಪಂತ್ ಮ್ಯಾಚ್ ವಿನ್ನರ್ ಎಂಬುದನ್ನು ಈ ಹಿಂದಿನ ಪಂದ್ಯಗಳಲ್ಲಿ ಸಾಬೀತು ಮಾಡಿದ್ದಾರೆ. ಈಗ ಅವರು ಕಳಪೆ ಫಾರ್ಮ್ನಲ್ಲಿದ್ದಾರೆ ಹೀಗಾಗಿ ಅವರನ್ನು ಬೆಂಬಲಿಸುವ ಅಗತ್ಯ ಇದೆ. ಇತ್ತೀಚಿನ ಪಂದ್ಯಗಳಲ್ಲಿ ಅವರು ವಿಫಲತೆ ಕಂಡಿದ್ದಾರೆ. ಆದರೆ, ಅವರಲ್ಲಿ ಉತ್ತಮ ಬ್ಯಾಟಿಂಗ್ ಸಾಮರ್ಥ್ಯ ಇದೆ ಇದಕ್ಕಾಗಿ ಅವರಿಗೆ ಅವಕಾಶ ನೀಡಬೇಕಿದೆ ಎಂದು ಹೇಳಿದ್ದಾರೆ.
ಸಂಜುಸ್ಯಾಮ್ಸನ್ ಮೊದಲ ಪಂದ್ಯದಲ್ಲಿ ಮತ್ತು ಭಾರತದಲ್ಲಿ ನಡೆದ ಸೌಥ್ ಆಫ್ರಿಕಾ ನಡುವಣ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ದಕ್ಷಿಣ ಆಫ್ರಿಕಾದ ಸರಣಿಯಲ್ಲಿ 86, 30, 2 ರನ್ ದಾಖಲಿಸಿದ್ದರು ಮತ್ತು ಎಲ್ಲದರಲ್ಲೂ ಅಜೇಯರಾಗಿದ್ದರು. ನ್ಯೂಜಿಲ್ಯಾಂಡ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 36 ರನ್ ದಾಖಲಿಸಿದ್ದರು.