ನವದೆಹಲಿ:ನ್ಯೂಜಿಲ್ಯಾಂಡ್ ವಿರುದ್ಧ ಜೂನ್ ತಿಂಗಳಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದ್ದು, ಅದಕ್ಕಾಗಿ ಟೀಂ ಇಂಡಿಯಾ ಈಗಾಗಲೇ ಪ್ರಕಟಗೊಂಡಿದೆ.
ವಿಕೆಟ್ ಕೀಪರ್ಗಳಾಗಿರುವ ರಿಷಭ್ ಪಂತ್ ಹಾಗೂ ವೃದ್ಧಿಮಾನ್ ಸಹಾ ಇಬ್ಬರು ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಇದೀಗ ಸಹಾ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.
ಇದನ್ನೂ ಓದಿ: ಪಂತ್ ಬ್ಯಾಟಿಂಗ್ನಲ್ಲಿ ಅದ್ಭುತ ಪ್ರತಿಭೆ, ಕೀಪಿಂಗ್ನಲ್ಲಿ ತೊಟ್ಟಿಲಲ್ಲಿರುವ ಮಗು: ಸಯ್ಯದ್ ಕಿರ್ಮಾನಿ ವಿಶ್ಲೇಷಣೆ
ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸೇರಿದಂತೆ ಇಂಗ್ಲೆಂಡ್ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಗಳಲ್ಲಿ ರಿಷಭ್ ಪಂತ್ ಭಾರತದ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿರಬೇಕು ಎಂದು ವೃದ್ಧಿಮಾನ್ ಸಹಾ ಹೇಳಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾದ ನಂತರ ರಿಷಭ್ ಪಂತ್ ಟೀಂ ಇಂಡಿಯಾ ಸೇರಿಕೊಳ್ಳುವವರೆಗೂ ಅಂದರೆ 2014ರಿಂದ ಸಹಾ ಭಾರತದ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿದ್ದರು. ಆದರೆ, ಇದೀಗ ಪಂತ್ಗೆ ಹೆಚ್ಚಿನ ಆದ್ಯತೆ ನೀಡಲಾಗ್ತಿದೆ.
ರಿಷಭ್ ಪಂತ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಕೊನೆಯ ಕೆಲವು ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಉತ್ತಮ ಪ್ರದರ್ಶನ ನೀಡಿದ್ದು, ಇಂಗ್ಲೆಂಡ್ನಲ್ಲಿ ನಮ್ಮ ಮೊದಲ ಆಯ್ಕೆ ಕೀಪರ್ ಆಗಿರಬೇಕು. ನಾನು ಕಾಯುತ್ತೇನೆ. ಜೊತೆಗೆ ಯಾವುದೇ ಅವಕಾಶ ಸಿಕ್ಕರೂ ಪ್ರದರ್ಶನ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ.
ಬ್ಯಾಟಿಂಗ್ನಲ್ಲಿ ಪಂತ್ ವೈಫಲ್ಯ ಅನುಭವಿಸಿದ ಕಾರಣಕ್ಕಾಗಿ ವೃದ್ಧಿಮಾನ್ ಸಹಾ ಅವಕಾಶ ಪಡೆದುಕೊಂಡಿದ್ದರು. ಆದರೆ ಗಾಯದಿಂದಾಗಿ ಕಳೆದ ವರ್ಷ ಅಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಅವರು ಹೊರಗುಳಿದಿದ್ದರು. ಈ ವೇಳೆ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಅನೇಕ ಮಹತ್ವದ ಇನ್ನಿಂಗ್ಸ್ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.