ಮುಂಬೈ: ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಶಿಖರ್ ಧವನ್ ಸೋಮವಾರ ವಾಂಖೆಡೆಯಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ವಿಶೇಷ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಐಪಿಎಲ್ನಲ್ಲಿ ತಮ್ಮ 200ನೇ ಪಂದ್ಯವನ್ನಾಡುತ್ತಿರುವ ಶಿಖರ್ ಧವನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1000 ರನ್ ಸಿಡಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಐಪಿಎಲ್ನಲ್ಲಿ ಕೇವಲ ಇಬ್ಬರು ಬ್ಯಾಟರ್ಗಳು ಮಾತ್ರ ಒಂದೇ ತಂಡದ ವಿರುದ್ಧ 1000 ರನ್ ಸಿಡಿಸಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 1018 ರನ್ ಮತ್ತು ಡೇವಿಡ್ ವಾರ್ನರ್ ಪಂಜಾಬ್ ಕಿಂಗ್ಸ್ ವಿರುದ್ಧ 1005 ರನ್ಗಳಿಸಿದ್ದಾರೆ. ಇದೀಗ ಧವನ್ ಸಿಎಸ್ಕೆ ವಿರುದ್ಧ 1029 ರನ್ಗಳಿಸುವ ಮೂಲಕ ಲೀಗ್ನಲ್ಲಿ ಒಂದೇ ತಂಡದ ವಿರುದ್ಧ ಗರಿಷ್ಠ ರನ್ ದಾಖಲಿಸಿದ ಬ್ಯಾಟರ್ ಎಂಬ ವಿಶೇಷ ದಾಖಲೆಗೆ ಪಾತ್ರರಾದರು.