ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ನಷ್ಟಕ್ಕೆ 179ರನ್ಗಳಿಕೆ ಮಾಡಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಪಂಜಾಬ್ ಜೋಡಿ ಆರಂಭದಲ್ಲೇ ಆಘಾತ ಅನುಭವಿಸಿತು. ಕನ್ನಡಿಗ ಮಯಾಂಕ್ ಸ್ಥಾನಕ್ಕೆ ಅವಕಾಶ ಪಡೆದ ಪ್ರಭ್ಸಿಮ್ರಾನ್ ಸಿಂಗ್ ಕೇವಲ 7 ರನ್ಗಳಿಕೆ ಮಾಡಿ ವಿಕೆಟ್ ಒಪ್ಪಿಸಿದರು.
ಗೇಲ್-ರಾಹುಲ್ ಅಬ್ಬರ
ಮೊದಲ ವಿಕೆಟ್ ಪತನವಾಗುತ್ತಿದ್ದಂತೆ ಕ್ಯಾಪ್ಟನ್ ರಾಹುಲ್ ಸೇರಿಕೊಂಡ ಗೇಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ ಅರ್ಧಶತಕದ ಜೊತೆಯಾಟವಾಡಿ ತಂಡದ ಮೊತ್ತ ಹಿಗ್ಗಿಸುವಲ್ಲಿ ಯಶಸ್ವಿಯಾದರು. ವಿಶೇಷವಾಗಿ ಕೈಲ್ ಜೆಮಿಸನ್ ಎಸೆದ ಓವರ್ನಲ್ಲಿ ಐದು ಬೌಂಡರಿ ಸಿಡಿಸಿದರು. 24 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 6 ಬೌಂಡರಿ ಸೇರಿದಂತೆ 46ರನ್ಗಳಿಕೆ ಮಾಡಿ ವಿಕೆಟ್ ಒಪ್ಪಿಸಿದರು.