ದುಬೈ:ಕನ್ನಡಿಗ ಕೆಎಲ್ ರಾಹುಲ್ ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಚೆನ್ನೈ ನೀಡಿದ್ದ 135 ರನ್ಗಳ ಗುರಿಯನ್ನು ಕೇವಲ 13 ಓವರ್ಗಳಲ್ಲಿ ಮುಗಿಸಿದೆ.
135 ರನ್ಗಳ ಸುಲಭ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ ಇನ್ನೂ 42 ಎಸೆತಗಳು ಉಳಿದಿರುವಂತೆ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಸ್ಫೋಟಕ ಬ್ಯಾಟಿಂಗ್ ಮಾಡಿದ ರಾಹುಲ್ ಕೇವಲ 42 ಎಸೆತಗಳಲ್ಲಿ 7 ಬೌಂಡರಿ ಮತ್ತು 8 ಭರ್ಜರಿ ಸಿಕ್ಸರ್ಗಳ ನೆರವಿನಿಂದ ಅಜೇಯ 98 ರನ್ಗಳಿಸಿ ಪಂಜಾಬ್ ಗೆಲುವಿನ ರೂವಾರಿಯಾದರು.
ಮಯಾಂಕ್ ಅಗರ್ವಾಲ್ 12, ಶಾರುಕ್ ಖಾನ್ 8 ಮತ್ತು ಮಾರ್ಕ್ರಮ್ 13 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದರೆ, ದೀಪಕ್ ಚಹರ್ 1 ವಿಕೆಟ್ ಪಡೆದರು.