ಚೆನ್ನೈ:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಇಂದಿನ 17ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಪಂಜಾಬ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಕೆ.ಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದ್ದು, ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದಾಗಿದೆ. ಮುಂಬೈ ಇಂಡಿಯನ್ಸ್ ಆಡಿರುವ 4 ಪಂದ್ಯಗಳಲ್ಲಿ ಎರಡಲ್ಲಿ ಗೆದ್ದು, ಮತ್ತೆರೆಡು ಪಂದ್ಯಗಳಲ್ಲಿ ಸೋಲು ಕಂಡಿದ್ದು ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನು ಅದ್ಭುತ ಪ್ರದರ್ಶನದ ಹೊರತಾಗಿ ಕೂಡ ಪಂಜಾಬ್ ತಂಡ ಆಡಿರುವ 4 ಪಂದ್ಯಗಳ ಪೈಕಿ ಕೇವಲ 1ರಲ್ಲಿ ಗೆದ್ದು, ಉಳಿದ ಮೂರು ಪಂದ್ಯ ಕೈಚೆಲ್ಲಿದ್ದು, ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಉಭಯ ತಂಡಗಳು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 14 ಹಾಗೂ ಪಂಜಾಬ್ 12 ಪಂದ್ಯಗಳಲ್ಲಿ ಗೆಲುವು ದಾಖಲು ಮಾಡಿದೆ.
ಇದನ್ನೂ ಓದಿ: ಐಪಿಎಲ್ನಲ್ಲಿ 50 ವಿಕೆಟ್: ಸಹೋದರಿ ಮಾಲ್ತಿಯಿಂದ ದೀಪಕ್ ಚಹರ್ಗೆ ಈ ರೀತಿ ವಿಶ್!